ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ ಮೂರರಂದು ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ಹಿನ್ನೆಲೆ ಹೆಚ್ಚಿನ ಸಂಚಾರ ದಟ್ಟಣೆ ಸಾಧ್ಯತೆ ಇದೆ. ಸುಗಮ ಸಂಚಾರ ವ್ಯವಸ್ಥೆಗೊಳಿಸುವ ನಿಟ್ಟಿನಲ್ಲಿ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8ರ ವರೆಗೆ ಕೆಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ.
ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10ರವರೆಗೆ ಬೆಂಗಳೂರು ನಗರ ವ್ಯಾಪ್ತಿ ಪ್ರದೇಶದಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಕಬ್ಬನ್ ರಸ್ತೆಯ ಬಿಆರ್‌ವಿ ಜಂಕ್ಷನ್‌ನಿಂದ ಸಿಟಿಒ ಜಂಕ್ಷನ್, ಸಿಟಿಒ ವೃತ್ತದಿಂದ ವೃತ್ತದಿಂದ ಲೋಕಭವನ, ಬಾಳೇಕುಂದ್ರಿ ಜಂಕ್ಷನ್‌ನಿಂದ ಅಂಬೇಡ್ಕರ್ ರಸ್ತೆ ಕಡೆ, ಡಾ. ಅಂಬೇಡ್ಕರ್ ರಸ್ತೆಯ ಕೆ.ಆರ್. ಸರ್ಕಲ್ ಕಡೆಯಿಂದ ಕಾಫಿಬೋರ್ಡ್ ಜಂಕ್ಷನ್, ರೇಸ್‌ಕೋರ್ಸ್ ರಸ್ತೆಯ ಟ್ರಿಲೈಟ್ ಜಂಕ್ಷನ್‌ನಿಂದ ಸುಬ್ಬಣ್ಣ ಜಂಕ್ಷನ್, ಜೆ.ಡಿ.ಎಸ್ ಕ್ರಾಸ್‌ನಿಂದ ಸುಬ್ಬಣ್ಣ ಜಂಕ್ಷನ್, ಕ್ವೀನ್ಸ್ ಜಂಕ್ಷನ್ ಕಡೆಯಿಂದ ಸಿಟಿಒ ಕಡೆ, ಕ್ವೀನ್ಸ್ ಜಂಕ್ಷನ್‌ನಲ್ಲಿ ಸೆಂಟ್ ಮಾರ್ಕ್ಸ್ ರಸ್ತೆಯಿಂದ ಸಿಟಿಒ ಜಂಕ್ಷನ್ ಮಾರ್ಗಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಪರ್ಯಾಯ ರಸ್ತೆ ವಿವರಗಳು ಹೀಗಿವೆ, ಕಬ್ಬನ್ ರಸ್ತೆಯ ಬಿ.ಆರ್.ವಿ ಜಂಕ್ಷನ್‌ನಿಂದ ಸಿಟಿಒ ಜಂಕ್ಷನ್, ಸಿಟಿಒ ವೃತ್ತದಿಂದ ಲೋಕಭವನದವರೆಗೆ ಸಂಚರಿಸುವ ವಾಹನಗಳು ಬಿ.ಆರ್.ವಿ. ಜಂಕ್ಷನ್ ಬಳಿ ಶಿವಾಜಿನಗರ ಕಡೆಗೆ ಬಲತಿರುವು ಹಾಗೂ ಅನಿಲ್ ಕುಂಬ್ಳೆ ಜಂಕ್ಷನ್ ಕಡೆಗೆ ಎಡತಿರುವು ಪಡೆದು ಸಂಚರಿಸಬಹುದು.
ಕ್ವೀನ್ಸ್ ರಸ್ತೆ ಹಾಗೂ ಶಿವಾಜಿನಗರ ಕಡೆಯಿಂದ ಬರುವ ವಾಹನಗಳು ಬಾಳೇಕುಂದ್ರಿ ಜಂಕ್ಷನ್ ಬಳಿ ಕನ್ನಿಂಗ್‌ಹ್ಯಾಮ್ ರಸ್ತೆಯ ಮುಖಾಂತರ ಸಂಚರಿಸಬಹುದಾಗಿದೆ. ಕೆ.ಆರ್. ಸರ್ಕಲ್ ಕಡೆಯಿಂದ ಕಾಫಿಬೋರ್ಡ್ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ನೃಪತುಂಗ ರಸ್ತೆಯಲ್ಲಿ ಸಾಗಬಹುದು.
ರೇಸ್‌ಕೋರ್ಸ್ ರಸ್ತೆಯ ಟ್ರಿಲೈಟ್ ಜಂಕ್ಷನ್‌ನಿಂದ ಸುಬ್ಬಣ್ಣ ಜಂಕ್ಷನ್ ವರೆಗೆ ಸಂಚರಿಸುವ ವಾಹನಗಳು ಟ್ರಿಲೈಟ್ ಜಂಕ್ಷನ್ ಕಡೆಯಿಂದ ಶಿವಾನಂದ ಜಂಕ್ಷನ್ ಮೂಲಕ ಎಸ್.ಸಿ. ರಸ್ತೆ ಜಂಕ್ಷನ್ ತಲುಪಿ ಎಡತಿರುವು ಪಡೆದು ಹೋಗಬಹುದು.
ಕ್ವೀನ್ಸ್ ಜಂಕ್ಷನ್ ಕಡೆಯಿಂದ ಲೋಕ ಭವನದ ಕಡೆಗೆ ಸಂಚರಿಸುವ ವಾಹನಗಳು ಅನಿಲ್ ಕುಂಬ್ಳೆ ಹಾಗೂ ಬಿ.ಆರ್.ವಿ. ಜಂಕ್ಷನ್ ಮೂಲಕ ಸಂಚರಿಸಬಹುದು. ಹಲಸೂರು ಮತ್ತು ಹಳೆ ಏರ್‌ಪೋರ್ಟ್ ಕಡೆಯಿಂದ ಕೆಂಪೇಗೌಡ ಏರ್‌ಪೋರ್ಟ್ ಮತ್ತು ಬಸವೇಶ್ವರ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳ ಸವಾರರು ಬಿ.ಆರ್.ವಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಶಿವಾಜಿನಗರ ಬಸ್‌ನಿಲ್ದಾಣ ಮೂಲಕ ಬಾಳೆಕುಂದ್ರಿ ಜಂಕ್ಷನ್, ಕನ್ನಿಂಗ್ ಹ್ಯಾಂ ರಸ್ತೆ, ವಸಂತನಗರದಿಂದ ಹೆಬ್ಬಾಳ ಕಡೆಗೆ ಸಾಗಬಹುದು.
ಹಲಸೂರು ಮತ್ತು ಹಳೇ ಮದ್ರಾಸ್ ರಸ್ತೆ ಕಡೆಯಿಂದ ಹೆಬ್ಬಾಳ ಕಡೆಗೆ ಸಂಚರಿಸುವ ವಾಹನಗಳ ಸವಾರರು ಹಲಸೂರು ಲೇಕ್ ಮೂಲಕ ಟಿನ್ ಫ್ಯಾಕ್ಟರಿ ಜಂಕ್ಷನ್ ಬಳಿಯಿಂದ ರಿಂಗ್ ರಸ್ತೆಯ ಮೂಲಕ ಹೆಬ್ಬಾಳ ಕಡೆಗೆ ಹೋಗಬೇಕು. ಆಶೀರ್ವಾದಂ ವೃತ್ತ ಹಾಗೂ ಎಂ.ಜಿ. ರಸ್ತೆ ಕಡೆಯಿಂದ ಬರುವ ವಾಹನಗಳು ಬಿ.ಆರ್.ವಿ ಜಂಕ್ಷನ್ ಶಿವಾಜಿನಗರ ಬಸ್‌ನಿಲ್ದಾಣ ಮೂಲಕ ಬಾಳೆಕುಂದ್ರಿ ಜಂಕ್ಷನ್, ಕನ್ನಿಂಗ್ ಹ್ಯಾಂ ರಸ್ತೆ, ವಸಂತನಗರದಿಂದ ಹೆಬ್ಬಾಳ ಕಡೆಗೆ ಸಂಚರಿಸಬಹುದು.
ವಾಹನಗಳ ನಿಲುಗಡೆ ನಿಷೇಧ ಸ್ಥಳಗಳು
ಡಾ: ಬಿ.ಆರ್.ಅಂಬೇಡ್ಕರ್ ರಸ್ತೆ, ಬಾಳೇಕುಂದ್ರಿ ವೃತ್ತದಿಂದ ಕೆ.ಆರ್.ವೃತ್ತದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ. ಲೋಕಭವನ ರಸ್ತೆ ಬಿ.ಆರ್.ವಿ. ವೃತ್ತದಿಂದ – ಲೋಕಭವನ ಜಂಕ್ಷನ್, ಎಲ್.ಹೆಚ್.ರಸ್ತೆ, ಲೋಕಭವನ ಜಂಕ್ಷನ್ ನಿಂದ – ಚಾಲುಕ್ಯ ವೃತ್ತ. ಕ್ವೀನ್ಸ್ ರಸ್ತೆ, ಬಾಳೇಕುಂದ್ರಿ ಜಂಕ್ಷನ್‌ನಿಂದ– ಕ್ವೀನ್ಸ್ ವೃತ್ತ. ಪ್ಯಾಲೇಸ್ ರಸ್ತೆ, ಮೈಸೂರು ಬ್ಯಾಂಕ್ ವೃತ್ತದಿಂದ – ವಸಂತನಗರ ಕೆಳಸೇತುವೆ. ದೇವರಾಜ ಅರಸ್ ರಸ್ತೆ, ಚಾಲುಕ್ಯ ವೃತ್ತದಿಂದ – ಎಂ.ಎಸ್.ಬಿಲ್ಡಿಂಗ್ ವರೆಗೆ (ಒಳಭಾಗದ ರಸ್ತೆ ಸೇರಿ), ರೇಸ್ ಕೋರ್ಸ್ ರಸ್ತೆ, ಟ್ರಿಲೈಟ್ ಜಂಕ್ಷನ್ ನಿಂದ ಚಾಲುಕ್ಯ ವೃತ್ತ, ಪಾರ್ಕ್‌ಹೌಸ್ ರಸ್ತೆ, ಎ.ಜಿ.ಎಸ್. ಜಂಕ್ಷನ್ ನಿಂದ ಸಿ.ಐ.ಡಿ. ವೃತ್ತ, ಕಬ್ಬನ್ ಉದ್ಯಾನವನದ ಒಳಭಾಗದ ರಸ್ತೆಗಳು, ಮಿಲ್ಲರ್ ರಸ್ತೆ, ಎಲ್.ಆರ್.ಡಿ.ಇ. ಜಂಕ್ಷನ್ ನಿಂದ ಬಸವೇಶ್ವರ ವೃತ್ತ. ಇನ್‌ಫೆಂಟ್ರಿ ರಸ್ತೆ, ಅಲಿ ಆಸ್ಕರ್ ರಸ್ತೆ ಜಂಕ್ಷನ್ ನಿಂದ ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್. ಅಲಿ ಆಸ್ಕರ್ ರಸ್ತೆ, ರಾಜಭವನ ಜಂಕ್ಷನ್ ನಿಂದ ಅಲಿ ಆಸ್ಕರ್ ಕ್ರಾಸ್, ಕೆ.ಜಿ.ರಸ್ತೆ, ಪೊಲೀಸ್ ಕಾರ್ನರ್ ನಿಂದ ಮೈಸೂರು ಬ್ಯಾಂಕ್ ವೃತ್ತ. ಹಳೇ ಅಂಚೆ ಕಚೇರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತದಿಂದ ಕೆ.ಆರ್.ವೃತ್ತ, ನೃಪತುಂಗ ರಸ್ತೆ, ಕೆ.ಆರ್.ವೃತ್ತದಿಂದ ಪೊಲೀಸ್ ಕಾರ್ನರ್. ಕಸ್ತೂರಿಬಾ ರಸ್ತೆ, ಹಯ್ಸನ್ ವೃತ್ತದಿಂದ ಕ್ಲೀನ್ಸ್ ವೃತ್ತ. ಮಲ್ಯ ಆಸ್ಪತ್ರೆ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್. ಜಂಕ್ಷನ್, ಆರ್.ಆರ್.ಎಂ.ಆರ್. ರಸ್ತೆ, ಆರ್.ಆರ್.ಎಂ.ಆರ್. ಜಂಕ್ಷನ್ ನಿಂದ ಹಡನ್ ವೃತ್ತ. ಕಬ್ಬನ್ ರಸ್ತೆ, ಸಿ.ಟಿ.ಓ. ವೃತ್ತದಿಂದ ಮಣಿಪಾಲ್ ಸೆಂಟರ್, ಟಿ.ಚೌಡಯ್ಯ ರಸ್ತೆ, ಹಳೇ ಗೌಂಡ್ ಜಂಕ್ಷನ್ ನಿಂದ ಕಾವೇರಿ ಜಂಕ್ಷನ್, ರಮಣ ಮಹರ್ಷಿ ರಸ್ತೆ, ಕಾವೇರಿ ಜಂಕ್ಷನ್ ನಿಂದ ಮೇಖಿ ವೃತ್ತ.
ಪಾಸ್ ಹೊಂದಿರುವ ವಾಹನಗಳು ವಿಧಾನಸೌಧದ ಸಿಮೆಂಟ್ ಪಾರ್ಕಿಂಗ್ ಸ್ಥಳ ಹಾಗೂ ವಿಕಾಸಸೌಧದ ಸುತ್ತಮುತ್ತ, ರಾಜಭವನ ಹಿಂಭಾಗದ ಎಲ್.ಹೆಚ್. ವಾಹನ ನಿಲುಗಡೆ ಸ್ಥಳ, ನೆಹರೂ ತಾರಾಲಯದ ಆವರಣದಲ್ಲಿ ನಿಲುಗಡೆ.
ಪಾಸ್ ಹೊಂದಿಲ್ಲದ ವಾಹನಗಳು ಕೊಂಡಜ್ಜಿ ಭವನ ಅವರಣ, ಶಿವಾಜಿನಗರ ಬಸ್‌ನಿಲ್ದಾಣದ ಮೇಲ್ಬಾಗದ ಮಲೆವೆಲ್ ಪಾರ್ಕಿಂಗ್ ಸ್ಥಳ, ಕಂಠೀರವ ಕ್ರೀಡಾಂಗಣ, ಯು.ಬಿ. ಸಿಟಿ ಪಾರ್ಕಿಂಗ್ ಸ್ಥಳ ಕಾರ್ಪೊರೇಷನ್ ಕಚೇರಿ ಸ್ಥಳ, ಸರ್ಕಾರಿ ಕಲಾ ಕಾಲೇಜು ಆವರಣ, ಪ್ಯಾಲೇಸ್ ಮೈದಾನದ ಗೇಟ್ ನಂ. 2, 3 ಮತ್ತು 4 ರಲ್ಲಿ ನಿಲುಗಡೆ ಇರುತ್ತದೆ.


