ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಹಳ್ಳಿ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಡಿಕ್ಕಿಯಲ್ಲಿ ಸಿಲುಕಿ ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ಮಗು ಬಸವಪ್ರಭು ಕೊಟ್ಟುರೇಶ್ವರ ಅವರ ಮಗ. ಮಗು ಮನೆಯ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಆಡುತ್ತಾ ಕಾರಿನ ಡಿಕ್ಕಿಯೊಳಗೆ ಸೇರಿಕೊಂಡಿದ್ದಾನೆ. ಡಿಕ್ಕಿ ಲಾಕ್ ಆಗಿ ಉಸಿರುಗಟ್ಟಿ ಅಸು ನೀಗಿದೆ.
ಸ್ವಲ್ಪ ಹೊತ್ತಿನ ನಂತರ ಕುಟುಂಬಸ್ಥರು ಮಗುವಿಗಾಗಿ ಹುಡುಕಾಟ ನಡೆಸಿದಾಗ ಕಾರಿನ ಡಿಕ್ಕಿಯಲ್ಲಿ ಮಗು ಸಿಲುಕಿರುವುದು ಪತ್ತೆಯಾಗಿದೆ. ಮಗುವನ್ನು ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶಹಾಬಾದ್ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಗಂಡನ ಸಾವು, ಮಕ್ಕಳಿಬ್ಬರ ಕತ್ತು ಹಿಸುಕಿ ಸಾಯಿಸಿದ ತಾಯಿ ಆತ್ಮಹತ್ಯೆ ಯತ್ನ
ಪತಿಯ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ಮಹಿ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿಕೊಂದ ಘಟನೆ ಮುಳಬಾಗಿಲು ತಾಲೂಕಿನ ಆಲಂಗೂರು ಗ್ರಾಮದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಬುಜ್ಜಮ್ಮ (22) ಮಕ್ಕಳಾದ ಸರಸ್ವತಿ (3) ಹಾಗೂ 1 ವರ್ಷದ ಮಗು ಹೇಮಾಶ್ರೀಯನ್ನು ಹತ್ಯೆ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸಿದ್ದರು. ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ.
ಆಂಧ್ರದ ವಿನಾಯಕಪುರಂನ ಬಾಬು ಹಾಗೂ ಬುಜ್ಜಮ್ಮ ದಂಪತಿ ಒಂದು ವರ್ಷದಿಂದ ಆಲಂಗೂರಿನ ಮಾವಿನ ತೋಪಲ್ಲಿ ಕೆಲಸ ಮಾಡುತ್ತಿದ್ದರು. 20 ದಿನಗಳ ಹಿಂದೆ ಪತಿ ಬಾಬು ಅಪಘಾತದಲ್ಲಿ ಮೃತಪಟ್ಟಿದ್ದ. ಇದರಿಂದ ಮಹಿಳೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


