Menu

‘ಕಿಲ್ಲರ್’ ಚಿತ್ರೀಕರಣ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ ಯುವ ತಂತ್ರಜ್ಞ ಬಲಿ

ತಮಿಳು ನಟ ಎಸ್‌ಜೆ ಸೂರ್ಯ ಮುಖ್ಯ ಪಾತ್ರದಲ್ಲಿ ನಟನೆಯ  ‘ಕಿಲ್ಲರ್’ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ 26 ವರ್ಷದ ಯುವ ತಂತ್ರಜ್ಞ ಮದನ್ ಪ್ರಾಣ ಕಳೆದುಕೊಂಡಿದ್ದಾರೆ.
ಬಿನ್ನಿ ಮಿಲ್ಸ್‌ನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ನಡೆದ ಈ ದುರಂತದಲ್ಲಿ ಮೂವರು ತಂತ್ರಜ್ಞರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾಹಸ ದೃಶ್ಯ ಚಿತ್ರೀಕರಣಕ್ಕಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್‌ಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಸ್ಫೋಟಗೊಂಡಿವೆ. ಗಾಯಗೊಂಡ ಮದನ್‌ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಶಕ್ತಿವೇಲ್, ಸೂರ್ಯ ಮತ್ತು ದಿನಕರನ್ ಅವರಿಗೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.

ಚೆನ್ನೈ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ನಿರ್ಲಕ್ಷ್ಯದ ಆರೋಪದ ಮೇಲೆ ಸಿಲಿಂಡರ್ ಸರಬರಾಜು ಮಾಡಿದ ವೆಂಡರ್ ರಾಮು ಮತ್ತು ಮೇಲ್ವಿಚಾರಕ ಆರ್ಮುಗಂ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ದುರಂತಕ್ಕೆ ತಾಂತ್ರಿಕ ದೋಷ ಅಥವಾ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣವೋ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

‘ಕಿಲ್ಲರ್’ ಚಿತ್ರೀಕರಣವು ನಿಲ್ಲಿಸಲಾಗಿದೆ. ಚಿತ್ರತಂಡವು ಶೋಕ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಹಾಯ ಮಾಡುವುದಾಗಿ ತಿಳಿಸಿದೆ. ಪೊಲೀಸ್ ತನಿಖೆ ಪೂರ್ಣಗೊಂಡ ನಂತರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *