Menu

ಸಿಎಂ ಡಿಕೆ ಶಿವಕುಮಾರ್‌ ರಾಜ್ಯದ ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರ ಹೊರಡಿಸಲಿ: ಆರ್‌ ಅಶೋಕ

ಕೇರಳಂನ ನೂತನ ಮುಖ್ಯಮಂತ್ರಿ ಶ್ರೀ @vdsatheesan ಅವರು ತಮ್ಮ ರಾಜ್ಯದ ಆರ್ಥಿಕ ಸ್ಥಿತಿಗತಿಯ ನೈಜ ಚಿತ್ರಣವನ್ನು ಜನರ ಮುಂದಿಡುವ ಉದ್ದೇಶದಿಂದ ಹಣಕಾಸು ಶ್ವೇತಪತ್ರ ಮಂಡಿಸಿರುವುದು ಸ್ವಾಗತಾರ್ಹ.  ಅದೇ ಮಾದರಿಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಶ್ರೀ @DKShivakumar ಅವರೂ ಕೂಡ ರಾಜ್ಯದ ಹಣಕಾಸಿನ ಸ್ಥಿತಿಗತಿಯ ಕುರಿತು ಶ್ವೇತಪತ್ರ ಮಂಡಿಸಬೇಕು ಎಂದು ನಾನು ಆಗ್ರಹಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ  ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಶ್ರೀ @siddaramaiah ಅವರು ಕರ್ನಾಟಕಕ್ಕೆ ಬಿಟ್ಟುಹೋಗಿರುವ ಆರ್ಥಿಕ ಬಳುವಳಿ ಏನು ಎಂಬುದನ್ನು ತಿಳಿದುಕೊಳ್ಳುವ ಹಕ್ಕು ರಾಜ್ಯದ ಜನರಿಗಿದೆ. ರಾಜ್ಯದ ಸಾಲ ಎಷ್ಟು ಹೆಚ್ಚಾಗಿದೆ? ಸರ್ಕಾರದ ಖಜಾನೆಯ ನಿಜವಾದ ಸ್ಥಿತಿಗತಿ ಏನು? ಅವೈಜ್ಞಾನಿಕ ಯೋಜನೆಗಳು, ಮತಬ್ಯಾಂಕ್ ರಾಜಕಾರಣ ಮತ್ತು ದುಂದುವೆಚ್ಚಗಳಿಂದ ರಾಜ್ಯದ ಆರ್ಥಿಕತೆಗೆ ಎಷ್ಟು ಹಾನಿಯಾಗಿದೆ? ಮುಂದಿನ ಪೀಳಿಗೆಯ ಹೆಗಲ ಮೇಲೆ ಎಷ್ಟು ಸಾಲದ ಹೊರೆ ಹಾಕಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಮುಚ್ಚಿಡಲು, ಮರೆಮಾಚಲು ಏನೂ ಇಲ್ಲವಾದರೆ @INCKarnataka ಸರ್ಕಾರ ತಕ್ಷಣವೇ ವಿಧಾನಸಭೆಯಲ್ಲಿ ಹಣಕಾಸು ಶ್ವೇತಪತ್ರ ಮಂಡಿಸಲಿ. ಮುಖ್ಯಮಂತ್ರಿಗಳೇ, ಶ್ವೇತಪತ್ರವನ್ನು ಜನರ ಮುಂದಿಡಿ. ಸತ್ಯವನ್ನು ಹೊರಗೆ ಬರಲು ಬಿಡಿ. ಕರ್ನಾಟಕಕ್ಕೆ ಪಾರದರ್ಶಕತೆ ಬೇಕು. ಕನ್ನಡಿಗರಿಗೆ ಉತ್ತರದಾಯಿತ್ವ ಬೇಕು. ಎಲ್ಲಕ್ಕಿಂತ ಮುಖ್ಯವಾಗಿ, ಸಿದ್ದರಾಮಯ್ಯ ಸರ್ಕಾರ ರಾಜ್ಯಕ್ಕೆ ಬಿಟ್ಟುಹೋಗಿರುವ ನಿಜವಾದ “ಸಾಕ್ಷಿಗುಡ್ಡೆ” ಏನು ಎಂಬುದು ಜನರಿಗೆ ತಿಳಿಯಬೇಕು ಎಂದು ಬರೆದುಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *