Saturday, February 01, 2025
Menu

ಬಜೆಟ್‌ನಲ್ಲಿ ಕೃಷಿಗೆ ಆದ್ಯತೆ, ಕಿಸಾನ್ ಕ್ರೆಡಿಟ್ ಕಾರ್ಡ್‌ ಸಾಲ ಮಿತಿ 5 ಲಕ್ಷ ರೂ.ಗೆ ಹೆಚ್ಚಳ

ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲದ ಮಧ್ಯೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 2025-26 ನೇ ಕೇಂದ್ರ ಬಜೆಟ್‌ ಮಂಡಿಸಿದ್ದು, ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಒತ್ತು ನೀಡುವುದಾಗಿ ಹೇಳಿದ್ದಾರೆ. ಬಡತವನ್ನು ನಿರ್ಮೂಲನೆ ಗೊಳಿಸಿ, ಗುಣಮಟ್ಟದ ಜೀವನಶೈಲಿಗೆ ಆದ್ಯತೆ, ಕೌಶಲ್ಯಾಭಿವೃದ್ಧಿ, ಉದ್ಯೋಗ ಸೃಷ್ಟಿ, ಮಹಿಳಾ, ಮಕ್ಕಳ ಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಗಮನ ಹರಿಸಿ ಬಜೆಟ್‌ ಮಂಡಿಸುತ್ತಿರುವುದಾಗಿ ಹೇಳಿದ್ದಾರೆ.

ಕಿಸಾನ್ ಕ್ರೆಡಿಟ್ ಕಾರ್ಡ್‌ ಸಾಲದ ಮಿತಿ 5 ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಆಹಾರದಲ್ಲಿ ಪೌಷ್ಟಿಕಾಂಶಕ್ಕೆ ಮಹತ್ವ ನೀಡುವ ನಿಟ್ಟಿನಲ್ಲಿ ಬಿಹಾರದಲ್ಲಿ ಮಖಾನಾ ಬೋರ್ಡ್ ಸ್ಥಾಪನೆ ಪ್ರಕಟಿಸಿದ ಸಚಿವೆ, ಅಧಿಕ ಇಳುವಳಿ ಬೀಜಗಳ ಉತ್ಪಾದನೆ ಮತ್ತು ಸಂಶೋಧನೆ. ಎನ್‌ಸಿಸಿಎಫ್ ಕಡೆಯಿಂದ ಧಾನ್ಯಗಳ ಸಂಗ್ರಹಣೆ. ಹಣ್ಣು ಮತ್ತು ತರಕಾರಿಯನ್ನು ಬೆಳೆಗೆ ಪ್ರೊತ್ಸಾಹ ನೀಡಲಾಗುವುದು. ಧನಧಾನ್ಯ ಯೋಜನೆಯಡಿ ನೂರು ಜಿಲ್ಲೆಗಳನ್ನು ಕೇಂದ್ರೀಕರಿಸಿ ಯೋಜನೆ. ಕೃಷಿ ಉತ್ಪನ್ನಗಳ ಬೆಳವಣಿಗೆಗೆ ಆದ್ಯತೆ,  ನೀರಾವರಿ, ಹಾಗೂ ಸ್ಟೋರೆಜ್ ಗಳ ನಿರ್ಮಾಣ ಮಾಡುವ ಮೂಲಕ 1.7 ಕೋಟಿ ರೈತರಿಗೆ ಅನುಕೂಲ ಕಲ್ಪಿಸುವುದಾಗಿ ತಿಳಿಸಿದ್ದಾರೆ.

ಯೂರಿಯಾ ಪೂರೈಕೆಯನ್ನು ಹೆಚ್ಚಿಸಲು ಅಸ್ಸಾಂನಲ್ಲಿ ಯೂರಿಯಾ ಪ್ಲಾಂಟ್ ಸ್ಥಾಪಿಸಲಾಗುವುದು, ವಾರ್ಷಿಕ 12.7 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ ಸ್ಥಾವರವನ್ನು ಅಸ್ಸಾಂನ ನಾಮ್ರೂಪ್‌ನಲ್ಲಿ ಸ್ಥಾಪಿಸಲಾಗುವುದು ಎಂದಿದ್ದಾರೆ. ಅಂಡ ಮಾನ್‌, ನಿಕೋಬಾರ್‌ ಗುರಿಯಾಗಿಸಿಕೊಂಡು ಮೀನುಗಾರಿಕೆಗೆ ಒತ್ತು ನೀಡಿ ವಿಶೇಷ ವಲಯ ನಿರ್ಮಾಣ ಮಾಡಲಾ ಗುವುದು ಎಂದು ಹೇಳಿದ್ದಾರೆ.

ಬೇಳೆಕಾಳುಗಳಲ್ಲಿ ಸ್ವಾವಲಂಬನೆ ಸಾಧಿಸುವ ಆರು ವರ್ಷದ ಮಿಷನ್ ಪ್ರಕಟಿಸಿದ್ದಾರೆ. ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆಗಳಾದ ಎನ್​ಎಎಫ್​ಇಇ, ಎನ್​ಸಿಸಿಎಫ್ ಇತ್ಯಾದಿ ಸಂಸ್ಥೆಗಳೊಂದಿಗೆ ರೈತರು ಒಪ್ಪಂದ ಮಾಡಿಕೊಂಡು, ಬೇಳೆಕಾಳುಗಳನ್ನು ಮಾರಬಹುದು.

 

Related Posts

Leave a Reply

Your email address will not be published. Required fields are marked *