Saturday, September 12, 2026
Menu

ಇಸ್ರೇಲ್‌ ಮೇಲೆ ಇರಾನ್‌ ಕ್ಷಿಪಣಿ ದಾಳಿ: ಮಧ್ಯಪ್ರಾಚ್ಯ ಉದ್ವಿಗ್ನ

ಇರಾನ್ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಿದೆ. ಅಮೆರಿಕದ ಮನವಿ ಬದಿಗೊತ್ತಿ ಇರಾನ್‌ ಯಾವುದೇ ಎಚ್ಚರಿಕೆ ನೀಡದೆ ಇಸ್ರೇಲ್‌ನ ಬೈರೂತ್‌ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ.

ಈ ಬೆಳವಣಿಗೆಯಿಂದಾಗಿ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅನಿಶ್ಚಿತತೆ ಮುಂದುವರಿದಿದೆ. ಕ್ಷಿಪಣಿ ದಾಳಿ ನಡೆಸಿದ ಬಳಿಕ ತನ್ನ ಪಶ್ಚಿಮ ವಾಯುಪ್ರದೇಶವನ್ನು ಇರಾನ್‌ ಮುಚ್ಚಿದೆ. ಇಸ್ರೇಲ್‌ನಿಂದ ಸಂಭಾವ್ಯ ದಾಳಿ ಹಿನ್ನೆಲೆ ಇರಾಕ್ ಮತ್ತು ಸಿರಿಯಾ ತಮ್ಮ ವಾಯುಸೀಮೆಯನ್ನ ಬಂದ್‌ ಮಾಡಿವೆ. ಲೆಬನಾನ್‌ನ ಮೇಲೆ ಇಸ್ರೇಲ್‌ನಿಂದ ನಿರಂತರ ದಾಳಿ ನಡೆಯುತ್ತಿದ್ದರಿಂದ ಪ್ರತಿದಾಳಿ ನಡೆಸಿದ್ದಾಗಿ ಇರಾನ್ ಸಮರ್ಥಿಸಿಕೊಂಡಿದೆ.

ಇರಾನ್‌ನ ಕ್ಷಿಪಣಿಗಳನ್ನ ಹೊಡೆದುರುಳಿಸಿರುವುದಾಗಿ ಹೇಳಿಕೊಂಡಿರುವ ಇಸ್ರೇಲ್‌ ಸೇನೆ. ಪ್ರತೀಕಾರದ ದಾಳಿಗೆ ಮುಂದಾಗುತ್ತಿದೆ. ಇರಾನ್ ದಾಳಿಗೆ ಪ್ರತಿಯಾಗಿ ಇಸ್ರೇಲ್ ಕೂಡ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಇರಾನ್‌ನ ಕ್ಷಿಪಣಿ ದಾಳಿ‌ಗೆ ಪ್ರತೀಕಾರ ತೀರಿಸಿಕೊಳ್ಳಬಾರದು, ರಾಜತಾಂತ್ರಿಕತೆಗೆ ಹೆಚ್ಚಿನ ಸಮಯ ನೀಡಬೇಕೆಂದು ಅಮೆರಿಕ ಅಧ್ಯಕ್ಷ ಟ್ರಂಪ್‌ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ತಿಳಿಸಿದ್ದಾರೆ ಎಂದು ಹೇಳಳಾಗುತ್ತಿದೆ. ತನ್ನ ಮೇಲೆ ದಾಳಿ ಮಾಡುವ ಮೂಲಕ ಇರಾನ್ ಗಂಭೀರ ತಪ್ಪು ಮಾಡಿದೆ ಎಂದು ಇಸ್ರೇಲ್‌ ಸೇನೆ ಹೇಳಿದೆ.
ಹೆಜ್ಜುಲ್ಲಾ ಬಂಡುಕೋರರ ಗುಂಪು ಉತ್ತರ ಇಸ್ರೇಲ್ ಕಡೆಗೆ ಗುಂಡಿನ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ದಕ್ಷಿಣ ಬೈರೂತ್‌ನ ಉಪನಗರಗಳ ಮೇಲೆ ವೈಮಾನಿಕ ದಾಳಿ ನಡೆಸಲಾಗಿದೆ ಎಂದು ನೆತನ್ಯಾಹು ಹೇಳಿಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *