Saturday, September 12, 2026
Menu

ಪ್ರೊ. ನಾಗರಾಜ್‌ಗೆ ರಾಜ್ಯಸಭೆ, ಲಿಂಗರಾಜು, ರಘುಗೆ ಪರಿಷತ್‌ ಟಿಕೆಟ್‌ ನೀಡಿದ ಬಿಜೆಪಿ

ರಾಜ್ಯಸಭೆ ಮತ್ತು ವಿಧಾನ ಪರಿಷತ್ತಿನ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ರಾಜ್ಯಸಭೆಗೆ ಪ್ರೊ.ಎಂ.ನಾಗರಾಜ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ಜೆಡಿಎಸ್‌ ಮುಖಂಡ ಹೆಚ್‌ಡಿ ದೇವೇಗೌಟ ಅವರ ಮರು ಆಯ್ಕೆ ವದಂತಿಗೆ ತೆರೆ ಎಳೆದಿದೆ.

ವಿಧಾನ ಪರಿಷತ್ತಿಗೆ ಬಿಜೆಪಿಯು ಲಿಂಗರಾಜು ಪಾಟೀಲ್ ಮತ್ತು ರಘು ಕೌಟಿಲ್ಯ ಅವರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿದೆ. ಪಕ್ಷದ ರಾಜ್ಯ ಘಟಕ ರಾಜ್ಯಸಭಾ ಚುನಾವಣೆಗೆ ಡಿವಿಸದಾನಂದಗೌಡ, ಮಾಜಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಷ್‌ ಹೆಸರುಗಳನ್ನು ಶಿಫಾರಸ್ಸು ಮಾಡಿತ್ತು. ಪರಿಷತ್ ಚುನಾವಣೆಗೆ ರಘು ಕೌಟಿಲ್ಯ, ಪ್ರಮೋದ್ ಮಧ್ವರಾಜ್, ನಳಿನ್ ಕುಮಾರ್ ಕಟೀಲ್, ಲಿಂಗರಾಜ ಪಾಟೀಲ್, ಮಂಜುಳಾ ಹಾಗೂ ಶರಣು ತಳ್ಳಿಕೇರಿ ಅವರ ಹೆಸರು ಕಳಿಸಿತ್ತು.

ನಾಗರಾಜ್ ಮತ್ತು ರಘು ಕೌಟಿಲ್ಯ ಒಬಿಸಿಗೆ ಸೇರಿದವರು, ಲಿಂಗರಾಜ ಪಾಟೀಲ್ ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ನಾಗರಾಜ್ ಶಿಕ್ಷಣ ಮತ್ತು ರಾಜಕೀಯ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿದ್ದು, ಬಿಜೆಪಿಯ ಹಿರಿಯ ಮುಖಂಡ. ಹುಬ್ಬಳ್ಳಿ-ಧಾರವಾಡದವರಾದ ನಾಗರಾಜ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಎಬಿವಿಪಿ- ಆರ್‌ಎಸ್‌ಎಸ್ ಸಂಘಟನೆಗಳ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದವರು. ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿ ನಿರ್ವಹಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ಅನುಭವ ಇದೆ.

Related Posts

Leave a Reply

Your email address will not be published. Required fields are marked *