Menu

ರೈತರ ಆಕ್ರೋಶಕ್ಕೆ ಕಾಂಗ್ರೆಸ್‌ ಸರ್ಕಾರ ಭಸ್ಮವಾಗಲಿದೆ: ಆರ್‌ ಅಶೋಕ

ರೈತರ ಜಮೀನಿನ ಮೇಲೆ ಬುಲ್ಡೋಜರ್ ಓಡಿಸಿ, ರಿಯಲ್ ಎಸ್ಟೇಟ್ ಸಾಮ್ರಾಜ್ಯ ಕಟ್ಟಲು ಹೊರಟಿರುವ Commission Minister @DKShivakumar ಅವರೇ, ಅನ್ನದಾತರ ಆಕ್ರೋಶದ ಜ್ವಾಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಸ್ಮವಾಗಬೇಕಾಗುತ್ತದೆ, ಎಚ್ಚರಿಕೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು,  470 ದಿನಗಳಿಂದ ಅನ್ನದಾತರು ನಡೆಸುತ್ತಿರುವ ಹೋರಾಟ, ಕಣ್ಣೀರು ಮತ್ತು ಆಕ್ರೋಶವನ್ನು ಲೆಕ್ಕಿಸದೆ, ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ 499 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕಬಳಿಸಲು ಅಂತಿಮ ಅಧಿಸೂಚನೆ ಹೊರಡಿಸಿರುವುದು ನಿಮ್ಮ @INCKarnataka ಸರ್ಕಾರದ ನಿಜವಾದ ಮುಖವನ್ನು ಬಯಲು ಮಾಡಿದೆ ಎಂದು ಬರೆದುಕೊಂಡಿದ್ದಾರೆ.

ಮುಖ್ಯಮಂತ್ರಿಗಳೇ, ರಾಜ್ಯದ ರೈತರನ್ನು ನೀವು ದುರ್ಬಲರೆಂದು ಭಾವಿಸಿದ್ದರೆ ಅದು ನಿಮ್ಮ ದೊಡ್ಡ ತಪ್ಪು! ಇನ್ನು ಕೇವಲ ಒಂದೂವರೆ ವರ್ಷದಲ್ಲಿ ನಿಮ್ಮ ಈ ಜನವಿರೋಧಿ ಸರ್ಕಾರ ಇತಿಹಾಸದ ಪುಟ ಸೇರಲಿದೆ. 2028ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಈ ಇಡೀ ಅಕ್ರಮ ಭೂಸ್ವಾಧೀನ ಪ್ರಕ್ರಿಯೆಯನ್ನು ಅಧಿಕೃತವಾಗಿ ರದ್ದುಪಡಿಸಲಾಗುವುದು. ರೈತರಿಗೆ ಕೊಟ್ಟಿರುವ ಮಾತನ್ನು ನಾವು ಖಂಡಿತ ಉಳಿಸಿಕೊಳ್ಳುತ್ತೇವೆ. ರೈತರ ತೀವ್ರ ವಿರೋಧದ ನಡುವೆಯೂ ಇಷ್ಟೊಂದು ಆತುರಾತುರವಾಗಿ ಭೂಮಿ ಕಬಳಿಸಲು ಹೊರಟಿರುವುದರ ಹಿಂದಿನ ಅಸಲಿ ರಹಸ್ಯವೇನು? ನಿಮ್ಮ ಬಿಲ್ಡರ್ ಮಾಫಿಯಾದ ಜೇಬು ತುಂಬಿಸುವ ರಿಯಲ್ ಎಸ್ಟೇಟ್ ಅಜೆಂಡಾವೇ ಇದಕ್ಕೆ ಕಾರಣವಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಕಸದ ಟೆಂಡರ್‌ನಲ್ಲೂ ಸಾವಿರಾರು ಕೋಟಿ ಕಮಿಷನ್ ವಾಸನೆ ಹೊಡೆದ ಈ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ, ಈಗ ಅನ್ನದಾತರ ಜಮೀನಿನಲ್ಲೂ ರಿಯಲ್ ಎಸ್ಟೇಟ್ ಬಂಗಾರ ಹುಡುಕಲು ಹೊರಟಿದೆ.  ಡಿಕೆ ಶಿವಕುಮಾರ್ ಅವರೇ, ನಿಮ್ಮ ಆಡಳಿತದಲ್ಲಿ CM ಎಂದರೆ “Chief Minister” ಅಲ್ಲ, ಅದು “Commission Minister”, “Corruption Minister” ಎಂಬ ಹೆಸರನ್ನು  ಸ್ವತಃ ಸಂಪಾದಿಸಿಕೊಂಡಿದ್ದೀರಿ. ಅನ್ನದಾತರ ಹೊಟ್ಟೆಗೆ ಹೊಡೆದು ಕಟ್ಟುವ ಯಾವುದೇ ಟೌನ್‌ಶಿಪ್ ಅಭಿವೃದ್ಧಿಯಲ್ಲ, ಅದು ರೈತರ ಭವಿಷ್ಯದ ಸಮಾಧಿ. ಈ ಹೋರಾಟ ಕೇವಲ 499 ಎಕರೆ ಜಮೀನಿಗಾಗಿ ಅಲ್ಲ, ಇದು ರೈತರ ಹಕ್ಕು, ಗೌರವ ಮತ್ತು ಬದುಕಿನ ಹೋರಾಟ. ಸರ್ಕಾರ ಕೂಡಲೇ ಈ ಭೂಸ್ವಾಧೀನ ಪ್ರಕ್ರಿಯೆಯನ್ನು ಹಿಂಪಡೆಯಬೇಕು. ಇಲ್ಲವಾದರೆ ರಾಜ್ಯದ ರೈತರ ಆಕ್ರೋಶದ ಜ್ವಾಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಸ್ಮವಾಗಬೇಕಾಗುತ್ತದೆಎಂದು  ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *