Menu

ಭಾರತದ ಸೇನಾ ಮುಖ್ಯಸ್ಥರಾಗಿ ಲೆ.ಜ ಧೀರಜ್ ಸೇಠ್

ಭಾರತದ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ನೇಮಕಗೊಳಿಸಿ ಕೇಂದ್ರ ಸರ್ಕಾರ ದೇಶ ಪ್ರಕಟಿಸಿದೆ. ಸೇನೆಯ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ನಿವೃತ್ತಿ ಬಳಿಕ
ಧೀರಜ್‌ ಸೇಠ್‌ ಜೂನ್‌ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಧೀರಜ್ ಸೇಠ್ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೂನ್‌ 30 ರಂದು ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, 2028 ರ ಆಗಸ್ಟ್‌ 31ರ ವರೆಗೆ ಅಧಿಕಾರದಲ್ಲಿ ಇರಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹಳೆಯ ವಿದ್ಯಾರ್ಥಿ ಮತ್ತು ಆರ್ಮರ್ಡ್ ಕಾರ್ಪ್ಸ್ ಅಧಿಕಾರಿಯಾಗಿರುವ ಸೇಠ್, 40 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಖಡಕ್ವಾಸ್ಲಾ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹಳೆಯ ವಿದ್ಯಾರ್ಥಿಯೂ ಆಗಿರುವ ಅವರು 1986 ರ ಡಿಸೆಂಬರ್‌ ನಲ್ಲಿ ಭಾರತೀಯ ಸೇನೆಗೆ ಸೇರ್ಪಡೆಯಾದರು. ನಾಲ್ಕು ದಶಕ ಸೇನೆಯ ವಿವಿಧ ವಿಭಾಗಗಳಲ್ಲಿ ಹಾಗೂ ವೈವಿಧ್ಯಮಯ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಮರುಭೂಮಿ ವಲಯದಲ್ಲಿ ಆರ್ಮರ್ಡ್ ರೆಜಿಮೆಂಟ್‌ ಕಮಾಂಡರ್ ಆಗಿ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ದಂಗೆ ನಿಗ್ರಹ ಗ್ರಿಡ್‌ನ ಭಾಗ ಯೂನಿಫಾರ್ಮ್ ಫೋರ್ಸ್‌ ಕಮಾಂಡರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಲೆಫ್ಟಿನೆಂಟ್ ಜನರಲ್ ಆಗಿ ಬಡ್ತಿ ಪಡೆದ ನಂತರ, 21ನೇ ಸ್ಟ್ರೈಕ್ ಕಾರ್ಪ್ಸ್‌ಗೆ ಕಮಾಂಡರ್ ಆಗಿ ಮತ್ತು ನಂತರ ದೆಹಲಿ ಪ್ರದೇಶದ ಜನರಲ್ ಕಮಾಂಡಿಂಗ್‌ ಆಫೀಸರ್ ಕಮಾಂಡಿಂಗ್ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸೌತ್ ವೆಸ್ಟರ್ನ್ ಕಮಾಂಡ್ ಮತ್ತು ಸದರ್ನ್ ಕಮಾಂಡ್‌ನಲ್ಲಿ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ವತಂತ್ರ ಶಸ್ತ್ರಸಜ್ಜಿತ ಬ್ರಿಗೇಡ್‌ನ ಮೇಜರ್, ಅಂಗೋಲಾದಲ್ಲಿ ವಿಶ್ವಸಂಸ್ಥೆಯ ಮಿಷನ್‌ ಕಾರ್ಯಾಚರಣೆ ಅಧಿಕಾರಿ, ಸೇನಾ ಪ್ರಧಾನ ಕಚೇರಿಯಲ್ಲಿ ಸಹಾಯಕ ಮಿಲಿಟರಿ ಕಾರ್ಯದರ್ಶಿ, ಸೌತ್ ವೆಸ್ಟರ್ನ್ ಕಮಾಂಡ್‌ನಲ್ಲಿ ಬ್ರಿಗೇಡಿಯರ್ ಜನರಲ್ ಸ್ಟಾಫ್ ಸೇರಿದಂತೆ ನಾನಾ ಹುದ್ದೆಗಳಲ್ಲಿ ಸಾಮರ್ಥ್ಯ ತೋರಿದ್ದಾರೆ.

Related Posts

Leave a Reply

Your email address will not be published. Required fields are marked *