Menu

ಪ್ರತಿಪಕ್ಷಗಳ ವದಂತಿಗಳಿಗೆ ಕಿವಿಗೊಡಬೇಡಿ, ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ

ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ ಎಂದು ಮುಖ್ಯಮಂತ್ರಿಗಳು ಮಾಧ್ಯಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಎಲ್ಲ ಗ್ಯಾರಂಟಿ ಯೋಜನೆಗಳು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ. ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಶಿವಕುಮಾರ್  ಸ್ಪಷ್ಟವಾಗಿ ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ ಆದಾಯ ತೆರಿಗೆ ಪಾವತಿಸುವವರು  ಫಲಾನುಭವಿಗಳಾಗಿರುವ ಪ್ರಕರಣಗಳು ಮತ್ತು ಮೃತಪಟ್ಟವರ ಹೆಸರಿನಲ್ಲಿ  ಯೋಜನೆಯ ಲಾಭ ಪಡೆಯುತ್ತಿರುವ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆ ಯೋಜನೆಯನ್ನು ಪರಿಷ್ಕರಿಸಲು  ಸರ್ಕಾರ ಕ್ರಮ ಕೈಗೊಂಡಿದೆ.  ಇದನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ನಾಯಕ ಆರ್‌ ಅಶೋಕ ಸೇರಿದಂತೆ ಬಿಜೆಪಿ ನಾಯಕರು , ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ನಿಲ್ಲಿಸಲು ಹುನ್ನಾರ ನಡೆಸುತ್ತಿರುವುದಾಗಿ ಹೇಳಿಕೊಂಡು ಬರುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಶಿವಕುಮಾರ್‌ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಫಲಾನುಬವಿಗಳಿಗೆ ಭರವಸೆ ನೀಡಿದ್ದಾರೆ.

 

Related Posts

Leave a Reply

Your email address will not be published. Required fields are marked *