ಯುದ್ಧ ವಿರಾಮ ಘೋಷಣೆಯೊಂದಿಗೆ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದ ಜಾರಿ ನೀರಿಕ್ಷೆಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಶಮನದ ಹಾದಿಯಲ್ಲಿದೆ, ಈ ಹಿನ್ನೆಲೆ ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ.
ಬ್ರೆಂಟ್ ಕ್ರೂಡ್ ಬೆಲೆ ಒಂದೇ ದಿನದಲ್ಲಿ ಶೇಕಡಾ 4 ಕುಸಿತ ಕಂಡು 80 ಡಾಲರ್ಗೆ ಇಳಿದಿದೆ. ಯುದ್ಧದ ಭೀತಿಯಿಂದಾಗಿ ಕಚ್ಚಾ ತೈಲ ಬೆಲೆ ತೀವ್ರವಾಗಿ ಏರಿಕೆ ಕಂಡಿದ್ದು, ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಹಾಗೂ ಅಡುಗೆ ಅನಿಲದ ಬೆಲೆ ಹೆಚ್ಚಳಗೊಂಡು ಜನಸಾಮಾನ್ಯರು ಪರದಾಡುವಂತಾಗಿತ್ತು. ಈಗ ಹರ್ಮುಝ್ ಜಲಸಂಧಿ ಮುಕ್ತವಾಗಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದು, ತೈಲ ಹಡಗುಗಳ ಸಂಚಾರ ಸುಗಮವಾಗಲಿದೆ.
ಜಾಗತಿಕ ಮಟ್ಟದಲ್ಲಿ ಸೃಷ್ಟಿಯಾಗಿದ್ದ ತೈಲಬಿಕ್ಕಟ್ಟು, ಆರೀಕ ತಲ್ಲಣ ಕೊನೆಯಾಗುವ ನಿರೀಕ್ಷೆಯಿದೆ. ಇಂಧನ ಬೆಲೆ ಇಳಿಕೆಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಲಕ್ಷಣಗಳಿವೆ. ಇದು ಜನ ಸಾಮಾನ್ಯರು, ವ್ಯಾಪಾರಿಗಳು, ಉದ್ಯಮಿಗಳು, ವಾಹನ ಸವಾರರಿಗೆ ತುಸು ನಿರಾಳತೆ ನೀಡಲಿದೆ.


