ಮೈಸೂರಿನ ದಟ್ಟಗಳ್ಳಿಯಲ್ಲಿರುವ ಫಾಕ್ಸ್ ಡೆನ್ ರೆಸ್ಟೋ ಬಾರ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಾಹಿಲ್, ಪ್ರಕಾಶ್ ಮೃತಪಟ್ಟವರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ ಪಬ್ ಅನ್ನು ನಿಯಮಬಾಹಿರವಾಗಿ ನಡೆಸಲಾಗುತ್ತಿತ್ತು ಎಂಬ ಮಾತುಗಳು ಕೇಳಿ ಬಂದಿವೆ. ಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪಕ್ಕದಲ್ಲೇ ಈ ಪಬ್ ಕಾರ್ಯನಿರ್ವಹಿಸುತ್ತಿದ್ದು, 100 ಮೀಟರ್ ಅಂತರದಲ್ಲಿ ಆಸ್ಪತ್ರೆ, ಶಾಲೆ, ದೇವಸ್ಥಾನಗಳಿರಬಾರದು ಎಂಬ ನಿಯಮವನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪ ತೀವ್ರವಾಗಿ ಕೇಳಿ ಬಂದಿದೆ.
ಪಬ್ಗೆ ಒಂದೇ ಕಿರಿದಾದ ಪ್ರವೇಶದ್ವಾರ ಇದ್ದು, ಬೆಂಕಿ ಸ್ನೇಹಿಯಾಗಿರುವ ಹುಲ್ಲು ಮತ್ತು ಬಿದಿರಿನಂತಹ ವಸ್ತುಗಳನ್ನು ಬಳಸಲಾಗಿದ್ದು, ಬೆಂಕಿ ತೀವ್ರಗತಿಯಲ್ಲಿ ವ್ಯಾಪಿಸಲು ಕಾರಣವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮೈಸೂರಿನ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ. ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಶಾಹಿಲ್, ಪ್ರಕಾಶ್ ಮೃತ ದುರ್ವೈವಿಗಳು. ಇನ್ನು ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಏಕಾಏಕಿ ಕಾಣಿಸಿಕೊಂಡ ಬೆಂಕಿ ಮೊದಲು ಪಬ್ನ ಅಡುಗೆ ಕೋಣೆಯಲ್ಲಿ ಹೊತ್ತಿಕೊಂಡಿದೆ. ಬಳಿಕ ಇಡೀ ಪಬ್ ಗೆ ವ್ಯಾಪಿಸಿ ದಟ್ಟ ಹೊಗೆ ಕಟ್ಟಡವನ್ನು ಆವರಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಸಿಲಿಂಡರ್ ಸ್ಫೋಟ ಗೊಂಡಿರಬಹುದು ಎಂದು ಶಂಕಿಸಲಾಗಿದೆ. ನಿಖರವಾದ ಕಾರ ತನಿಖೆ ಬಳಿಕ ಹೊರ ಬರಬೇಕಿದೆ.
ಸಿಲಿಂಡರ್ ಸ್ಫೋಟದಿಂದಾಗಿ ಸುಟ್ಟಗಾಯಗಳಾಗಿದ್ದ ಪಬ್ನ ಸಿಬ್ಬಂದಿ ಮತ್ತು ಗ್ರಾಹಕರನ್ನು ತಕ್ಷಣವೇ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಮೈಸೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


