Thursday, September 17, 2026
Menu

ಅಮೆರಿಕ-ಇರಾನ್‌ ಒಪ್ಪಂದ ಒಪ್ಪಲ್ಲ, ಲೆಬನಾನ್‌ನಿಂದ ಸೇನೆ ವಾಪಸ್‌ ಪಡೆಯಲ್ಲ: ಇಸ್ರೇಲ್‌ ಎಚ್ಚರಿಕೆ

ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದಕ್ಕೆ ಇಸ್ರೇಲ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ನೇತೃತ್ವದಲ್ಲಿ ನಡೆದಿರುವ ಈ ಒಪ್ಪಂದಕ್ಕೆ ಇಸ್ರೇಲ್ ಬದ್ಧವಾಗಿಲ್ಲ, ಯಾವುದೇ ಕಾರಣಕ್ಕೂ ಲೆಬನಾನ್‌ನಿಂದ ತನ್ನ ಸೇನೆ ವಾಪಸ್‌ ಹಿಂಪಡೆಯುವುದಿಲ್ಲ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಚಿವ ಇತಾಮರ್ ಬೆನ್-ಗ್ವಿರ್ ಸ್ಪಷ್ಟಪಡಿಸಿದ್ದಾರೆ.

ದೇಶದ ಭದ್ರತೆಯ ವಿಷಯದಲ್ಲಿ ಇಸ್ರೇಲ್ ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ, ಅಮೆರಿಕದ ಒತ್ತಡಕ್ಕೆ ಮಣಿಯುವುದಿಲ್ಲ ಎಂದಿದ್ದಾರೆ.ಈ ಒಪ್ಪಂದವು ಇಸ್ರೇಲ್ ಅನ್ನು ಯಾವುದೇ ರೀತಿ ಕಟ್ಟಿಹಾಕಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಜೂನ್ 19ರ ಶುಕ್ರವಾರದಂದು ಸ್ವಿಜರ್ಲೆಂಡ್‌ನಲ್ಲಿ ಅಧಿಕೃತವಾಗಿ ಸಹಿ ಆಗಲಿರುವ ಈ ಒಪ್ಪಂದವು, ಲೆಬನಾನ್ ಸೇರಿದಂತೆ ಎಲ್ಲಾ ರಂಗಗಳಲ್ಲೂ ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಹೇಳಿದೆ, ಆದರೆ ಇಸ್ರೇಲ್‌ ಸ್ವತಂತ್ರ ರಕ್ಷಣಾ ನೀತಿ ಮುಂದುವರಿಸುವುದಾಗಿ ಪ್ರತಿಕ್ರಿಯಿಸಿದೆ. ಟ್ರಂಪ್ ಒಪ್ಪಂದ ನಮಗೆ ಅನ್ವಯಿಸುವುದಿಲ್ಲ. ಇಸ್ರೇಲ್ ದೇಶವು ಅಮೆರಿಕದ ಅಧೀನದಲ್ಲಿಲ್ಲ. ಸ್ವತಂತ್ರ ಮತ್ತು ಸಾರ್ವಭೌಮ ರಾಷ್ಟ್ರ, ಇಸ್ರೇಲ್ ಯಾವುದೇ ದುರ್ಬಲ ದೇಶವಲ್ಲ ಎಂದು ಇಸ್ರೇಲ್ ಭದ್ರತಾ ಸಚಿವ ಇತಾಮರ್ ಬೆನ್-ಗ್ವಿರ್ ಹೇಳಿದ್ದಾರೆ.

ನಾವು ಇಸ್ರೇಲ್‌ನ ಭದ್ರತೆಯನ್ನು ಪಣಕ್ಕಿಟ್ಟು ಅಂತಾರಾಷ್ಟ್ರೀಯ ಒತ್ತಡಗಳಿಗೆ ತಲೆಬಾಗಿದಾಗಲೆಲ್ಲಾ ರಕ್ತದ ಮೂಲಕ ಭಾರಿ ಬೆಲೆ ತೆರಬೇಕಾಗಿ ಬಂದಿದೆ. ಲೆಬನಾನ್‌ನಲ್ಲಿ ಇರಾನ್ ಬೆಂಬಲಿತ ಹೆಜ್ಬುಲ್ಲಾ ಉಗ್ರಗಾಮಿ ಸಂಘಟನೆಯನ್ನು ಗಿ ನಿರ್ನಾಮ ಮಾಡುವವರೆಗೂ ರಾಜಿ ಮಾಡಿಕೊಳ್ಳುವುದಿಲ್ಲ. ಯುದ್ಧದ ಸಮಯದಲ್ಲಿ ವಶಪಡಿಸಿಕೊಂಡಿರುವ ಲೆಬನಾನ್ ಭೂಭಾಗದಿಂದ ಇಸ್ರೇಲ್‌ ಪಡೆಗಳು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಲೆಬನಾನ್‌ನಿಂದ ಇಸ್ರೇಲ್ ಕಡೆಗೆ ಒಂದು ಡ್ರೋನ್ ಅಥವಾ ಕ್ಷಿಪಣಿ ಹಾರಿಬಂದರೂ, ಪ್ರತಿಯಾಗಿ ಲೆಬನಾನ್‌ನ ರಾಜಧಾನಿ ಬೈರೂತ್‌ನ ಹೆಜ್ಬುಲ್ಲಾ ಭದ್ರಕೋಟೆಯಾದ ದಹಿಯಾ ಮೇಲೆ ಇಸ್ರೇಲ್ ಭೀಕರ ದಾಳಿ ನಡೆಸಲಿ ಎಂದು ಎಚ್ಚರಿಸಿದ್ದಾರೆ.

ಪಾಕಿಸ್ತಾನ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ಅಮೆರಿಕ-ಇರಾನ್ ಒಪ್ಪಂದವು ಅಂತಿಮ ಹಂತ ತಲುಪಿದ್ದು, ಹರ್ಮುಜ್ ಜಲಸಂಧಿ ಮುಕ್ತಗೊಳಿಸಲು ಹಾಗೂ ಇರಾನ್ ಮೇಲಿನ ಅಮೆರಿಕದ ನೌಕಾ ದಿಗ್ಬಂಧನವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಇರಾನ್ ತನ್ನ ಯುರೇನಿಯಂ ದಾಸ್ತಾನನ್ನು ತನ್ನಲ್ಲೇ ಇಟ್ಟುಕೊಳ್ಳಲು ಹಠ ಹಿಡಿದಿದೆ.

ಸಿರಿಯನ್ ಅಧ್ಯಕ್ಷ ಅಹ್ಮದ್ ಅಲ್-ಶರಾ ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದು ಹೊಗಳಿದ್ದಾರೆ. ಇಸ್ರೇಲ್ ಹೆಜ್ಬೊಲ್ಲಾ ವಿರುದ್ಧ ಕೆಲಸವನ್ನು ಮಾಡಲು ಸಾಧ್ಯವಾಗದಿದ್ದರೆ, ಸಿರಿಯಾ ಆ ಕೆಲಸವನ್ನು ಮಾಡುತ್ತದೆ ಎಂದು ಟ್ರಂಪ್ ಹೇಳಿದ್ದಾರೆ.

ಸಿರಿಯಾ ಹಿಜ್ಬೊಲ್ಲಾವನ್ನು ನೋಡಿಕೊಳ್ಳಲಿ ಎಂದು ನಾನು ಇಸ್ರೇಲ್‌ಗೆ ಸೂಚಿಸಿದೆ, ಪ್ರಾಮಾಣಿಕವಾಗಿ ಹೇಳಬೇಕೆಂದರೆ ಅವರು ಉತ್ತಮ ಕೆಲಸ ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಟ್ರಂಪ್ ತಿಳಿಸಿದ್ದಾರೆ.
ನಾನು ಇಲ್ಲದೆ ಇಸ್ರೇಲ್ ಇರುತ್ತಿರಲಿಲ್ಲ ಏಕೆಂದರೆ ನಾನು ಮಾಡಿದ್ದನ್ನು ಬೇರೆ ಯಾವುದೇ ಅಧ್ಯಕ್ಷರು ಮಾಡಲು ಸಿದ್ಧರಿರಲಿಲ್ಲ ಎಂದು ಅವರು ಹೇಳಿದರು.

Related Posts

Leave a Reply

Your email address will not be published. Required fields are marked *