Menu

ವಿಧಾನ ಪರಿಷತ್​​ ನ ಏಳು ಸ್ಥಾನಗಳಲ್ಲಿ ಐದು ಕಾಂಗ್ರೆಸ್​​ ಪಾಲು

ಭಾರಿ ಕುತೂಹಲ ಮೂಡಿಸಿದ್ದ ವಿಧಾನಸಭೆಯಿಂದ ವಿಧಾನ ಪರಿಷತ್​​ ನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಪರಾಭವಗೊಂಡಿದ್ದು, ಬಿಜೆಪಿ ಮತ್ತು ಜೆಡಿಎಸ್​​ನಿಂದ ಅಡ್ಡ ಮತದಾನ( ಕ್ರಾಸ್​​ ವೋಟಿಂಗ್​​) ಆಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ.

ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ.  ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್​ಗೆ 11 ಹೆಚ್ಚುವರಿ ಮತಗಳು ದೊರೆತಿವೆ. ಶಿವರಾಂ ಹೆಬ್ಬಾರ್, ಎಸ್​.ಟಿ.ಸೋಮಶೇಖರ್ ಹೊರತುಪಡಿಸಿ ಬಿಜೆಪಿಯ 3 ಮತ್ತು ಜೆಡಿಎಸ್​ನ 6 ಶಾಸಕರಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾವಣೆಗೊಂಡಿದೆ. ಹೀಗಾಗಿ ಲಿಂಗರಾಜ ಪಾಟೀಲ್ ಗೆಲುವಿನ ಕೋಟಾ ತಲುಪಿರಲಿಲ್ಲ.

ಪ್ರತಿ ಅಭ್ಯರ್ಥಿ ಗೆಲ್ಲಲು 27.63 ಮತ ಪಡೆಯಬೇಕು. ಆದರೆ ಲಿಂಗರಾಜ ಪಾಟೀಲ್​ಗೆ ಕೇವಲ 27 ಮತಗಳು ಸಿಕ್ಕಿದ್ದವು. ಜೆಡಿಎಸ್​ನ ಗೋವಿಂದರಾಜು 14 ಮತ ಪಡೆದಿದ್ದ ಹಿನ್ನೆಲೆಯಲ್ಲಿ ಎಲಿಮಿನೇಷನ್ ರೌಂಡ್​ನಲ್ಲಿ ಲಿಂಗರಾಜ್ ಪಾಟೀಲ್​ಗೆ ಜಯ ಸಿಕ್ಕಿದೆ.  ಚಲಾವಣೆಗೊಂಡಿದ್ದ 222 ಮತಗಳಲ್ಲಿ  ಒಂದು ಮತ ಅಸಿಂಧುವಾಗಿದೆ. ನಂಬರ್ ಸರಿಯಾಗಿ ಬರೆಯದಿದ್ದಕ್ಕೆ 1 ಮತವನ್ನು ತಿರಸ್ಕರಿಸಲಾಗಿದೆ.

ಕಾಂಗ್ರೆಸ್: ಬಿ.ಕೆ. ಹರಿಪ್ರಸಾದ್​​ಗೆ 30 ಮತಗಳು,  ತಿಪ್ಪಣ್ಣಪ್ಪ ಕಮಕನೂರುಗೆ 30 ಮತಗಳು,  ಪಿ.ವಿ.ಮೋಹನ್​ಗೆ 29 ಮತಗಳು ಲಭಿಸಿವೆ. ಬಿ.ಎಸ್.ಶಿವಣ್ಣಗೆ 30 ಮತಗಳು, 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತಗಳು ಸಿಕ್ಕಿವೆ.
ಬಿಜೆಪಿ: ಆರ್.ರಘುಗೆ 29 ಮತಗಳು, ಲಿಂಗರಾಜು ಪಾಟೀಲ್​ಗೆ 27 ಮತಗಳು, ಜೆಡಿಎಸ್ ಅಭ್ಯರ್ಥಿ ಗೋವಿಂದರಾಜುಗೆ 14 ಮತಗಳು ಬಂದಿವೆ.

Related Posts

Leave a Reply

Your email address will not be published. Required fields are marked *