ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ದೇಶಾದ್ಯಂತ 50 ಪ್ರವಾಸಿ ತಾಣಗಳ ಅಭಿವೃದ್ಧಿ ಮಾಡಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದ್ದಾರೆ.
ಶನಿವಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ನಲ್ಲಿ ದೇಶಾದ್ಯಂತ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯ ವೃದ್ಧಿಸುವ ಮೂಲಕ ಅಭಿವೃದ್ಧಿ ಯೋಜನೆ ಇದಾಗಿದೆ ಎಂದರು.
ಪ್ರವಾಸಿ ತಾಣಗಳಲ್ಲಿ ಹೋಟೆಲ್ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ಮುದ್ರಾ ಯೋಜನೆಗೆ ಒತ್ತು ನೀಡಲಾಗುವುದು. ಈ ಮೂಲಕ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಉತ್ತೇಜನ ನೀಡಲಾಗುವುದು ಎಂದರು.
ಇದೇ ವೇಳೆ ಬಿಹಾರದಲ್ಲಿ ಗ್ರೀನ್ ವಿಮಾನ ನಿಲ್ದಾಣಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಬೌದ್ಧ ಕೇಂದ್ರಗಳ ಅಭಿವೃದ್ಧಿಗೆ ನೆರವು ನೀಡುವುದಾಗಿ ಘೋಷಿಸಿದರು.