ಈ ಬಾರಿಯ ಬಜೆಟ್ನಲ್ಲಿ ರೈಲ್ವೆ ಇಲಾಖೆಗೆ 2.60 ಲಕ್ಷ ಕೋಟಿ ರೂ. ಮೀಸಲಿಡಲಾಗಿದ್ದು, ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,564 ಕೋಟಿ ರೂ. ನೀಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಬಜೆಟ್ ನಲ್ಲಿ ರೈಲ್ವೆ ಇಲಾಖೆಗೆ ನೀಡಿದ ಅನುದಾನ ಕುರಿತು ವಿವರಿಸಿದರು.
ಸಚಿವ ವಿ.ಸೋಮಣ್ಣ ರೈಲ್ವೆ ಸುರಕ್ಷತೆಗೆ ಹೆಚ್ಚಿನ ಹಣ ಮೀಸಲಾಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗ ನಡೆಯುತ್ತೆ. ಕರ್ನಾಟಕಕ್ಕೆ ಕಳೆದ ವರ್ಷ 7,559 ಕೋಟಿ ರೂ ಮೀಸಲಾಡಲಾಗಿತ್ತು. ಈ ಬಾರಿ 7,564 ಕೋಟಿ ರೂ. ಮೀಸಲಿಡಲಾಗಿದೆ. ಸಬ್ ಅರ್ಬನ್ ರೈಲಿಗೆ ಈ ಬಾರಿಯೂ 350 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಅನುದಾನ ಹಂಚಿಕೆ?
ಗದಗ-ವಾಡಿ ಮಾರ್ಗದ ಯೋಜನೆಗೆ 549.45 ಕೋಟಿ ರೂ.
ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆಗೆ 549.45 ಕೋಟಿ ರೂ.
ಬಾಗಲಕೋಟ-ಕುಡಚಿ ಮಾರ್ಗದ ಯೋಜನೆಗೆ 428.1 ಕೋಟಿ ರೂ.
ಹೊಸಪೇಟೆ-ಹುಬ್ಬಳ್ಳಿ-ಲೋಂಡಾ-ತಿನೈಘಾಟ್-ವಾಸ್ಕೋ ಡಿ ಗಾಮಾ (352.28 ಕಿ.ಮೀ) ರೈಲ್ವೆ ಮಾರ್ಗದ ಯೋಜನೆಗೆ 413.73 ಕೋಟಿ ರೂ.
ಹೊಟಗಿ-ಕುಡಗಿ-ಗದಗ ಮಾರ್ಗದ ಯೋಜನೆಗೆ 401.15 ಕೋಟಿ ರೂ.
ಬೆಂಗಳೂರು-ವೈಟ್‌ಫೀಲ್ಡ್-ಕೃಷ್ಣರಾಜಪುರಂ ಚತುಷ್ಪಥ ಪುಣೆ, ಮೀರಜ್-ಲೋಂಡಾ ಮಾರ್ಗದ ರೈಲ್ವೆ ಯೋಜನೆಗೆ 357.6 ಕೋಟಿ ರೂ.
ಬೈಯಪನಹಳ್ಳಿಯಿಂದ ಹೊಸೂರು ಮಾರ್ಗಕ್ಕೆ 223.5 ಕೋಟಿ ರೂ.
ಮುನಿರಾಬಾದ್-ಮಹಬೂಬ್ನರ ಮಾರ್ಗದ ಯೋಜನೆಗೆ 214.05 ಕೋಟಿ ರೂ.
ಯಶವಂತಪುರದಿಂದ ಚನ್ನಸಂದ್ರ ಮಾರ್ಗ ಯೋಜನೆಗೆ 178.8 ಕೋಟಿ ರೂ.
ತೋರಣಗಲ್ಲು-ರಂಜಿತ್‌ಪುರ ಮಾರ್ಗದ ಯೋಜನೆಗೆ 104.47 ಕೋಟಿ ರೂ.
ದೌಂಡ್-ಕಲಬುರಗಿ ಡಬ್ಲಿಂಗ್ ಮತ್ತು ಪುಣೆ-ಗುಂತಕಲ್ ವಿದ್ಯುತೀಕರಣಕ್ಕೆ ಒಟ್ಟು 641.37 ಕಿ.ಮೀ. ಮಾರ್ಗದ ಯೋಜನೆಗೆ 84.39 ಕೋಟಿ ರೂ.