Menu

ಜಿಲ್ಲೆಗಳಲ್ಲಿ ಮಳೆಗಾಲ ತುರ್ತು ಪರಿಸ್ಥಿತಿ ನಿರ್ವಹಣೆಗೆ ಉಸ್ತುವಾರಿ ಸಚಿವರು

ರಾಜ್ಯದ ಸಚಿವರಿಗೆ ಮಳೆಗಾಲದ ತುರ್ತು ಪರಿಸ್ಥಿತಿ ಮತ್ತು ಪ್ರವಾಹ ನಿರ್ವಹಣೆಗಾಗಿ ತಾತ್ಕಾಲಿಕ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡುವ ಮೂಲಕ ಸಿಎಂ ಡಿಕೆ ಶಿವಕುಮಾರ್‌ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಇದು ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಸಮನ್ವಯಕ್ಕಾಗಿ ಮಾತ್ರವಾಗಿದ್ದು, ಪೂರ್ಣ ಪ್ರಮಾಣದ ಉಸ್ತುವಾರಿ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದೆ ಎಂದು ಹೇಳಲಾಗುತ್ತಿದೆ.

ಆಡಳಿತ ವ್ಯವಸ್ಥೆ ಚುರುಕುಗೊಳಿಸುವ ಹಾಗೂ ಜಿಲ್ಲಾ ಮಟ್ಟದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ಮತ್ತು ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸುವ ಗುರಿಯೊಂದಿಗೆ ಸಿಎಂ ಈ ಕ್ರಮಕ್ಕೆ ಮುಂದಾಗಿದ್ದಾರೆ.

ರಾಜ್ಯದಲ್ಲಿ ಮುಂಗಾರು ಮಳೆ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದ ಭೀತಿ ಎದುರಾಗಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮತ್ತು ಪರಿಹಾರ ಕಾಮಗಾರಿಗಳ ಉಸ್ತುವಾರಿ ವಹಿಸಲು ಸಚಿವರಿಗೆ ಜಿಲ್ಲೆಗಳ ತುರ್ತು ಪ್ರಕೃತಿ ವಿಕೋಪ ಮೇಲುಸ್ತುವಾರಿ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳ ಜವಾಬ್ದಾರಿಯನ್ನು ಡಿಸಿಎಂ ಡಾ. ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್ , ಯತೀಂದ್ರ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆ ವಹಿಸಲಾಗಿದೆ.
ಪರಮೇಶ್ವರ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ, ಕೃಷ್ಣ ಭೈರೇಗೌಡ ಅವರಿಗೆ ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆ, ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ , ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

ಡಾ. ಯತೀಂದ್ರ ಸಿದ್ದರಾಮಯ್ಯಗೆ ಮೈಸೂರು ಮತ್ತು ಚಾಮರಾಜನಗರ, ಯು.ಟಿ. ಖಾದರ್ ಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಎಂ.ಬಿ. ಪಾಟೀಲ್ ಗೆ ವಿಜಯಪುರ ಮತ್ತು ಬಾಗಲಕೋಟೆ, ಪ್ರಿಯಾಂಕ್ ಖರ್ಗೆಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

ಸತೀಶ್ ಜಾರಕಿಹೊಳಿಗೆ ಬೆಳಗಾವಿ, ಧಾರವಾಡ ಮತ್ತು ಹಾವೇರಿ, ಕೆ.ಜೆ. ಜಾರ್ಜ್ ಗೆ ಚಿಕ್ಕಮಗಳೂರು ಮತ್ತು ದಾವಣಗೆರೆ, ಈಶ್ವರ ಖಂಡ್ರೆಗೆ ಬೀದರ್ ಮತ್ತು ಗದಗ, ಭೈರತಿ ಸುರೇಶ್ ಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ, ಡಾ. ಶರಣಪ್ರಕಾಶ್ ಪಾಟೀಲ್ ಗೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

Related Posts

Leave a Reply

Your email address will not be published. Required fields are marked *