Menu

ಪೋಕ್ಸೋ ಆರೋಪಿ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಪಡೆದುಕೊಂಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್‌ ರದ್ದುಪಡಿಸಿದೆ.

ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಆದೇಶ ಪ್ರಕಟಿಸಿದೆ. ರೆಗ್ಯುಲರ್ ಜಾಮೀನಿಗೆ ಅರ್ಜಿ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಿದೆ. ಹೀಗಾಗಿ ಬಂಧನ ಭೀತಿಯಿಂದ ಆರೋಪಿ ವಚನಾನಂದ ಶ್ರೀ ಪಾರಾಗಿದ್ದಾರೆ.

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ನಿರಿಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದು ಹೇಳಿದೆ, ದೂರು ನೀಡುವ ವಾರ ಮೊದಲೇ ನಿರೀಕ್ಷಣಾ ಜಾಮೀನು ನೀಡಲಾಗಿದೆ, ಇದು ಸರಿಯಾದ ಕ್ರಮವಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಮೇ 7ರಂದು ಸ್ವಾಮೀಜಿ ವಿರುದ್ಧ ಪೋಕ್ಸೋ ದೂರು ದಾಖಲಾಗಿದೆ. ಅದರ ಹಿಂದಿನ ದಿನ ಅಂದರೆ ಮೇ 6ರಂದೇ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ದೂರು ದಾಖಲು ಮುನ್ನವೇ ಜಾಮೀನು ಕೊಟ್ಟ ರೀತಿ ಆಘಾತಕಾರಿ ಎಂದು ಹೈಕೋರ್ಟ್‌ ಹೇಳಿದ್ದು, ಆರೋಪಿ ಶ್ರೀಗೆ ನೋಟಿಸ್ ಜಾರಿ ಮಾಡಿತ್ತು.

Related Posts

Leave a Reply

Your email address will not be published. Required fields are marked *