Menu

ಅನೈತಿಕ ಸಂಬಂಧ ಶಂಕೆ: ಪತ್ನಿಯ ಕೊಲೆಗೈದ ಪತಿ

ಶ್ರೀರಂಗಪಟ್ಟಣ ತಾಲೂಕಿನ ಆಲಗೂಡು ಗ್ರಾಮದಲ್ಲಿ ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ಪತ್ನಿಯ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.

ರಶ್ಮಿ ಕೊಲೆಯಾದ ಮಹಿಳೆ, ಆಕೆಯ ಪತಿ ಆಲಗೂಡು ಗ್ರಾಮದ ರಮೇಶ್ ಕೊಲೆ ಆರೋಪಿ, ಕಳೆದ ಕೆಲವು ಸಮಯದಿಂದ ಪತ್ನಿಯ ನಡತೆಯ ಮೇಲೆ ಅನುಮಾನ ಪಡುತ್ತಿದ್ದ. ಇದೇ ವಿಷಯವಾಗಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.

ದಂಪತಿ ನಡುವೆ ಜಗಳದಲ್ಲಿ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ರಮೇಶ್ ಕಬ್ಬಿಣದ ರಾಡಿನಿಂದ ರಶ್ಮಿ ತಲೆಗೆ ಬಲವಾಗಿ ಹೊಡೆದಿದ್ದಾನೆ. ರಕ್ತಸ್ರಾವದಿಂದ ರಶ್ಮಿ ಸ್ಥಳದಲ್ಲೇ ಮೃತಪಟ್ಟಿದ್ದರು. ಆರೋಪಿ ಅಲ್ಲಿಂದ ಪರಾರಿಯಾಗಿದ್ದು, ಪೊಲೀಸರು ಪತ್ತೆಗೆ ಬಲೆ ಬೀಸಿದ್ದಾರೆ. ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪಿಯು ವಿದ್ಯಾರ್ಥಿನಿ ಜೊತೆ ವಿವಾಹಿತ ಉಪನ್ಯಾಸಕನ ಅನೈತಿಕ ಸಂಬಂಧ

ಮದುವೆಯಾಗುವುದಾಗಿ ನಂಬಿಸಿ ಪಿಯು ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕ ಅನೈತಿಕ ಸಂಬಂಧ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬಳ್ಳಾರಿಯಲ್ಲಿ ಬಹಿರಂಗಗೊಂಡಿದೆ.

ಬಳ್ಳಾರಿ ನಗರದ ಖಾಸಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್‌ ಎಂಬಾತನನ್ನು ಬಂಧಿಸಲಾಗಿದೆ. ರವಿಕಿರಣ್ ಗೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ.

ನಿನ್ನನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತೇನೆ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ನಂಬಿಸಿ ವಿದ್ಯಾರ್ಥಿನಿ ಜೊತೆ ಹಲವು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಇಬ್ಬರು ಮಕ್ಕಳಿರುವ ವಿಚಾರ ತಿಳಿದು ವಿದ್ಯಾರ್ಥಿನಿ ಆಘಾತಕ್ಕೊಳಗಾಗಿದ್ದಾಳೆ. ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಆಕೆಯ ದೂರು ಆಧರಿಸಿ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ರವಿಕಿರಣ್ ವಿರುದ್ಧ ಪೋಕ್ಸೋ ಕಾಯ್ದೆ ಇತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ.

Related Posts

Leave a Reply

Your email address will not be published. Required fields are marked *