Menu

ಕಿತ್ತೂರು ಕಸದ ತಿಪ್ಪೆಯಲ್ಲಿ ಹಸುಗೂಸು ಪತ್ತೆ

ತಾಯಿ ಹಸುಗೂಸನ್ನು ಕಸದ ತಿಪ್ಪೆಗೆ ಎಸೆದು ಪರಾರಿಯಾಗಿರುವ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ನಡೆದಿದೆ.

ಕಿತ್ತೂರು-ನರಗುಂದ ರಸ್ತೆಯ ಬಸವಣಕಟ್ಟಿ ಸೇತುವೆಯ ಕೆಳಭಾಗದಲ್ಲಿ ಅನಾಥವಾಗಿ ಬಿದ್ದಿದ್ದ ಗಂಡು ಮಗುವಿನ ಅಳುವಿನ ಧ್ವನಿ ಕೇಳಿ, ಕುರಿಗಾಹಿಯೊಬ್ಬರು ಸ್ಥಳಕ್ಕೆ ಬಂದು ಮಗುವನ್ನು ರಕ್ಷಿಸಿದ್ದಾರೆ.

ಮಗುವನ್ನು ರಕ್ಷಿಸಿದ ಕುರಿಗಾಹಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಮಗುವನ್ನು ಹೆಚ್ಚಿನ ಆರೈಕೆ ಮತ್ತು ಚಿಕಿತ್ಸೆಗಾಗಿ ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗುವಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯವಾಗಿದೆ ಎನ್ನಲಾಗಿದೆ. ಮಗುವನ್ನು ಹೀಗೆ ಎಸೆದಉ ಹೋದವರು ಯಾರು, ತಾಯಿ ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹೆಣ್ಣೆಂದು ಗರ್ಭಪಾತ ಮಾಡಿಸಿದರೆ ಅದು ಗಂಡು ಮಗು

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಹೆಣ್ಣು ಎಂದು ಗರ್ಭಪಾತ ಮಾಡುವ ವೇಳೆ ಗಂಡು ಮಗು ಎಂಬುದು ಪತ್ತೆಯಾಗಿದೆ. ಪಾಟೀಲ್​ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಡಾ.ರಾಜೇಂದ್ರ ಪಾಟೀಲ್ ವಿರುದ್ಧ ದೂರು ನೀಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಮುಧೋಳ ತಾಲೂಕಿನ ರನ್ನಬೆಳಗಲಿ ಗ್ರಾಮದ 24 ವರ್ಷದ ‌ಮಹಿಳೆಗೆ 14 ವಾರಗಳ ಭ್ರೂಣದ ಗರ್ಭಪಾತ ಮಾಡಲಾಗಿದೆ ಎಂದು ಹೇಳಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಡಿಎಚ್‌ಒ ಸುವರ್ಣ ಕುಲಕರ್ಣಿ, ಮುಧೋಳ ಟಿಎಚ್‌ಒ ಮಲಘಾಣ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related Posts

Leave a Reply

Your email address will not be published. Required fields are marked *