Menu

ಶಾಲಾ ಆವರಣದಲ್ಲೇ ಬಾಲಕಿಯ ಗ್ಯಾಂಗ್‌ ರೇಪ್‌: ಸರ್ಕಾರದ ವಿರುದ್ಧ ಅಶೋಕ್‌ ಕಿಡಿ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದ್ದು ದಿನಕ್ಕೊಂದು ಮಾನಭಂಗ, ಅತ್ಯಾಚಾರ ಪ್ರಕರಣಗಳು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸುತ್ತಲೇ ಇದೆ. ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ರಾಜ್ಯದಲ್ಲಿ ತಾಂಡವವಾಡುತ್ತಿರುವ ಅರಾಜಕತೆಗೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ಮಹಿಳೆಯರ ಮೇಲೆ ಅತ್ಯಾಚಾರವಾದರೆ ಬಿಜೆಪಿ ಕಾಲದಲ್ಲಿ ರೇಪ್ ಆಗಿಲ್ಲವಾ ಎಂದು ಉಡಾಫೆ ಉತ್ತರ ಕೊಡುತ್ತೀರಲ್ಲಾ, ನಿಮ್ಮ ಸರ್ಕಾರದ ಈ ಸಂವೇದನಾರಹಿತ ಧೋರಣೆ, ಅಲಕ್ಷ್ಯವೇ ಇವತ್ತಿನ ಅರಾಜಕತೆಗೆ ಕಾರಣ ಎಂದಿದ್ದಾರೆ.

ಆಕಸ್ಮಿಕ ಗೃಹ ಸಚಿವ ಪರಮೇಶ್ವರ್‌ ಅವರೇ, 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆ ಮೂವರು ಕಾಮುಕರನ್ನು ಬಂಧಿಸಿ, ಕಾನೂನಿನ ವಶಕ್ಕೆ ಒಪ್ಪಿಸಿ. ಮಹಿಳೆಯರ ಸುರಕ್ಷತೆಯ ವಿಷಯವನ್ನುಗಂಭೀರವಾಗಿ ಪರಿಗಣಿಸಿ ನಾಡಿನ ಹೆಣ್ಣುಮಕ್ಕಳಿಗೆ ನಿರ್ಭೀತಿಯಿಂದ ಓಡಾಡುವ ಗ್ಯಾರೆಂಟಿ ಕೊಡಿ ಎಂದು ಆಗ್ರಹಿಸಿದ್ದಾರೆ.

ಮಂಡ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಗೆ ಕೇಕ್ ಕೊಡಿಸಿ ಚಾಕುವಿನಿಂದ ಬೆದರಿಸಿ ಸರ್ಕಾರಿ ಶಾಲಾ ಆವರಣದಲ್ಲೇ ಗ್ಯಾಂಗ್‌ ರೇಪ್‌ ಮಾಡಿದ್ದು, ಅಸ್ವಸ್ಥ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಎರಡು ದಿನ ಕಳೆದರೂ ಹೊಟ್ಟೆ ನೋವು, ರಕ್ತಸ್ರಾವ ನಿಲ್ಲದ ಹಿನ್ನೆಲೆ ಬಾಲಕಿಯ ಚಿಕ್ಕಮ್ಮ ಬಂದು ವಿಚಾರಿಸಿದಾಗ ಬಾಲಕಿ ಈ ವಿಚಾರ ಬಾಯಿಬಿಟ್ಟಿದ್ದಾಳೆ.

Related Posts

Leave a Reply

Your email address will not be published. Required fields are marked *