Wednesday, October 14, 2026
Menu

ಬೆಂಗಳೂರಿನಲ್ಲಿ ತಾಯಿ, ಅಜ್ಜಿ, ಮಾವನ ಕೊಲೆಗೈದು ಯುವಕ ಆತ್ಮಹತ್ಯೆ

ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ಬೆಳಗ್ಗೆ ತಾಯಿ, ಅಜ್ಜಿ ಹಾಗೂ ಮಾವನನ್ನು ಕೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಮತ್ತು ಮಾವ ಸತೀಶ ಅವರನ್ನು ಪ್ರಶಾಂತ್ ಎಂಬಾತ ಕೊಲೆ ಮಾಡಿ ಬಳಿಕ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಮಾಕ್ಷಿಪಾಳ್ಯ ‌ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳಮ್ಮ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಂಜಮ್ಮ ಪೌರಕಾರ್ಮಿಕರಾಗಿದ್ದರು. ಸತೀಶ್ ಪ್ಲಂಬರ್ ಕೆಲಸ ಮಾಡುತ್ತಿದ್ದರು. ಕೊಲೆ ಆರೋಪಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕುಟುಂಬ ಏಳೆಂಟು ವರ್ಷದಿಂದ ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆರೋಪಿ ಪ್ರಶಾಂತ್‌ ಒಂದು ವರ್ಷದಿಂದ ಕೆಲಸಕ್ಕೆ ಹೋಗಿರಲಿಲ್ಲ. ತಂದೆ ಕೆಲಸಕ್ಕೆ ಹೋಗಿದ್ದಾಗ ಪ್ರಶಾಂತ್‌ ಮೂವರನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.

ಕೃತ್ಯ ಎಸಗಿದ ಬಳಿಕ ಆರೋಪಿ ಪರಾರಿಯಾಗಲು ಯತ್ನಿಸಿದ್ದ. ಮನೆ ಮಾಲೀಕರು ಹಾಗೂ ಸ್ಥಳೀಯರು ಆರೋಪಿಯನ್ನು ಕೊಠಡಿಯಲ್ಲಿ ಕೂಡಿ ಹಾಕಿದ್ದರು. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Related Posts

Leave a Reply

Your email address will not be published. Required fields are marked *