ಬೆಳಗಾವಿಯ ಪೀರನವಾಡಿಯಲ್ಲಿ ಗಂಡನ ಮನೆಯವರ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಬೇಸತ್ತ ತಾಯಿ ತನ್ನ ಮಗುವಿನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಬೆಳಗಾವಿಯ ಪೀರನವಾಡಿ ಪಾಟೀಲ್ ಗಲ್ಲಿಯ ನಿವಾಸಿ ಪ್ರೇಮಾ ನಾಗೇಶ ತಳವಾರ (28) ತನ್ನ ಮೂರು ವರ್ಷದ ಮಗ ಭುವನ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡನ ಮನೆಯವರು ಮಾಡಿದ್ದ ಸಾಲವನ್ನು ತೀರಿಸುವಂತೆ ಪ್ರೇಮಾ ಅವರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪವಿದೆ. ಗಂಡ, ಅತ್ತೆ ಸೇರಿದಂತೆ ಕುಟುಂಬದ ಒಟ್ಟು 6 ಸದಸ್ಯರು ಪ್ರೇಮಾ ಅವರಿಗೆ ಕಿರುಕುಳ ನೀಡುತ್ತಿದ್ದು, ಇದರಿಂದ ನೊಂದ ಆಕೆ ಮಗನೊಂದಿಗೆ ಸಾವಿಗೆ ಶರಣಾಗಿದ್ದಾರೆ.
ಪ್ರೇಮಾ ಕುಟುಂಬಸ್ಥರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅತ್ತೆ ಸುಶೀಲಾ ತಳವಾರ, ಪತಿ ನಾಗೇಶ ತಳವಾರ, ಮೈದುನ ಪರಶುರಾಮ ತಳವಾರ, ನಾದಿನಿ ಸಂಗೀತಾ ತಳವಾರ, ಮರೇವ್ವಾ ತಳವಾರ ಹಾಗೂ ಶಾರದಾ ಕಲಕಾಂವಕರ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವ್ಯಸನಮುಕ್ತ ಕೇಂದ್ರದಲ್ಲಿ ಪಿಸಿ ಸುಸೈಡ್
ಕುಷ್ಟಗಿಯಲ್ಲಿ ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಾಗಿದ್ದ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರಣಪ್ಪ ಉಪ್ಪಾರ (49) ನೇನು ಬಿಗಿದುಕೊಂಡವರು. ಮುನಿರಾಬಾದ್ ಐಆರ್‌ಬಿಯಲ್ಲಿ ಕೆಲಸ ಮಾಡುತ್ತಿದ್ದು, ಮದ್ಯ ವ್ಯಸನಕ್ಕೆ ದಾಸರಾಗಿದ್ದರು.
ಎರಡು ದಿನಗಳ ಹಿಂದೆ ವ್ಯಸನಮುಕ್ತ ಕೇಂದ್ರದಿಂದ ಮನೆಗೆ ಕರೆದುಕೊಂಡು ಹೋಗುವಂತೆ ಪತ್ನಿಗೆ ಕರೆ ಮಾಡಿದ್ದರು. ಮನೆಗೆ ಕರೆದುಕೊಂಡು ಹೋಗದೇ ಇದ್ದಿದ್ದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇಪಾಳದಲ್ಲಿ ಬೆಳಗಾವಿ ಯುವಕನ ಕೊಲೆ
ನೇಪಾಳದಲ್ಲಿ ಹೋಟೆಲ್ ಕೆಲಸಕೆಕಂದು ಹೋಗಿದ್ದ ಬೆಳಗಾವಿಯ ಯುವಕ ರೂಮ್‌ಮೇಟ್‌ನಿಂದಲೇ ಕೊಲೆಯಾಗಿರುವ ಘಟನೆ ನಡೆದಿದಿದೆ. ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಕೊಲೆಯಾದ ಯುವಕ.
ಸಾಯಿಲ್ ಶವವನ್ನು ಭಾರತ ತರುವಂತೆ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಬೇಡಿಕೊಂಡಿದ್ದಾರೆ.


