Menu

ಆನ್‌ಲೈನ್‌ ಗೇಮಿಂಗ್‌ ಚಟ: ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಹತ್ತಿರದ ಮಾರಪ್ಪನಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡು ಮೂರು ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 20 ವರ್ಷದ ಉದಯ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೆಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಉದಯ್, ಓದಿನ ಜೊತೆಗೆ ಪಾರ್ಟ್‌ ಟೈಂ ಕೆಲಸ ಮಾಡುತ್ತಿದ್ದ. ಉದಯ್‌ ಓದಿಗೆ ಅನುಕೂಲವಾಗಲೆಂದು ಪೋಷಕರಾದ ಸುರೇಶ್ ಹಾಗೂ ಪ್ರೇಮಲತಾ ಮನೆಯ ಮೇಲ್ಭಾಗದಲ್ಲಿ ಪ್ರತ್ಯೇಕ ಕೊಠಡಿ ಕಟ್ಟಿಸಿಕೊಟ್ಟಿದ್ದರು. ಅಲ್ಲೇ ಉದಯ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡು ಮೂರು ದಿನದ ಬಳಿಕ ದುರ್ವಾಸನೆ ಬರುತ್ತಿದ್ದುದನ್ನು ಗಮನಿಸಿದ ಕುಟುಂಬಸ್ಥರು ಕೊಠಡಿ ಪರಿಶೀಲಿಸಿದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಉದಯ್ ಆನ್‌ಲೈನ್ ಗೇಮಿಂಗ್ ಚಟಕ್ಕೆ ಒಳಗಾಗಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತನಿಖೆಯಲ್ಲಿ ಹೊರ ಬರಬೇಕಿದೆ.  ಮಾದನಾಯಕನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *