ವಿಜಯಪುರ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ ಕ್ರಾಸ್ ಬಳಿ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರಿಗೆ ಸನ್ಣಪುಟ್ಟ ಗಾಯಗಳಾಗಿವೆ.
ಕಾರ್ಮಿಕರು ಕಬ್ಬು ಕಟಾವು ಮಾಡಲು ಟ್ರ್ಯಾಕ್ಟರ್ನಲ್ಲಿ ಇಂಡಿಯಿಂದ ಮಂಡ್ಯಕ್ಕೆ ತೆರಳುತ್ತಿದ್ದರು. ಸ್ಪೀಡ್ ಬ್ರೇಕರ್ ಇದ್ದ ಹಿನ್ನೆಲೆ ಚಾಲಕ ನಿಧಾನವಾಗಿ ಟ್ರ್ಯಾಕ್ಟರ್ ಚಲಾಯಿಸಿದ್ದಾನೆ. ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಟ್ರ್ಯಾಕ್ಟರ್ಗೆ ಗುದ್ದಿದೆ. ಟ್ರ್ಯಾಕ್ಟರ್ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗರ್ಲ್ ಫ್ರೆಂಡ್ ಮಾತನಾಡ್ತಿಲ್ಲವೆಂದು ವ್ಯಕ್ತಿ ಆತ್ಮಹತ್ಯೆ
ಗರ್ಲ್ ಫ್ರೆಂಡ್ ಮಾತನಾಡುತ್ತಿಲ್ಲವೆಂದು ನೊಂದುಕೊಂಡ 41 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ ಪ್ಯಾಲೇಸ್ ಗುಟ್ಟಹಳಿಯಲ್ಲಿ ನಡೆದಿದೆ. ಡಾರ್ಜಿಲಿಂಗ್ನ ಸುದೀಪ್ (41) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಜನನಿಬಿಡ ಪ್ರದೇಶದ ದೇವಸ್ಥಾನದ ಎದುರಿನ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸೂಟ್ಕೇಸಲ್ಲಿ ನಗದು ಇಟ್ಟುಕೊಂಡಿದ್ದಾರೆ. ವೈಯಾಲಿಕಾವಲ್ ಪೊಲೀಸರು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


