Menu

ರಾಮೋಹಳ್ಳಿ ಕೆರೆಯಲ್ಲಿ ಶವ ಪತ್ತೆ: ಕೊಲೆ ಮಾಡಿ ಎಸೆದಿರುವ ಶಂಕೆ

ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಮೋಹಳ್ಳಿಯಲ್ಲಿ ಕೆರೆಯಲ್ಲಿ ಅನುಮಾನಾಸ್ಪದ ರೀತಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ತುಂಬಿ ಕೆಎಗೆ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.

ರಾಮೋಹಳ್ಳಿಯಲ್ಲಿ ಮಹಿಳೆಯನ್ನು ಕೊಂದು ಎರಡ್ಮೂರು ದಿನಗಳ ಹಿಂದೆ ಸೂಟ್​ಕೇಸ್​ನಲ್ಲಿ ಶವ ತುಂಬಿ ಕೆರೆಗೆ ಬಿಸಾಡಿದ್ದಾರೆ. ಕೆರೆಯಲ್ಲಿ ಶವ ತೇಲುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕುಂಬಳಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರ

ಬೆಂಗಳೂರಿನ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇವಸ್ಥಾನಕ್ಕೆಂದು ಬಾಲಕಿಯನ್ನು ಕರೆದು ಮದ್ಯಪಾನ ಮಾಡಿಸಿ ಇಬ್ಬರು ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ಬಾಲಕಿಯನ್ನು ಆಟೋದಲ್ಲಿ ಕರೆದೊಯ್ದು ಕುಡಿಸಿ ರಾತ್ರಿ ಪೂರ್ತಿ ಅತ್ಯಾಚಾರ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ದೇವನಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್​​ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ನವೀನ್, ವೆಂಕಟರಮಣ ಮತ್ತು ರೇಣುಕಾ ಎಂದು ಗುರುತಿಸಲಾಗಿದೆ.

Related Posts

Leave a Reply

Your email address will not be published. Required fields are marked *