ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹೈದರಾಬಾದ್‌ನ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೈದರಾಬಾದ್‌ನ ಸೈದಾಬಾದ್ ನಿವಾಸಿಶೇಖ್ ನವೀದ್ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುದ್ದಾಗ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನವೀದ್ ಪತ್ನಿ ನಾಜಿಯಾ ಸಲ್ಮಾ, ಪುತ್ರ ಹಾಗೂ ಪುತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನವೀದ್ ಮತ್ತು ಕಿರಿಯ ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶೇಖ್ ನವೀದ್ 10 ವರ್ಷ ಹಿಂದೆ ಅಮೆರಿಕಕ್ಕೆ ತೆರಳಿದ್ದು, ಅಲ್ಲಿಯೇ ಕುಟುಂಬದೊಂದಿಗೆ ನೆಲೆಸಿದ್ದರು. ತಂದೆ ಶೇಖ್ ಅಬ್ದುಲ್ ಸಯೀದ್ ಅವರು ಮಗನಿಗೆ ಕರೆ ಮಾಡಿದಾಗ ಅಮೆರಿಕದ ಪೊಲೀಸರಿಂದ ಅಪಘಾತದ ಬಗ್ಗೆ ಮಾಹಿತಿ ಲಭಿಸಿದೆ.
ಮಹಡಿಯಿಂದ ಬಿದ್ದ ವ್ಯಕ್ತಿಯಿಂದ ಮಹಿಳೆ ಸಾವು
ಜಪಾನ್‌ನ ನಗೋಯಾ ಎಕ್ಸ್‌ಪ್ರೆಸ್‌ವೇ ಬಳಿ ಜನನಿಬಿಡ ಪ್ರದೇಶದಲ್ಲಿ ಎರಡನೇ ಮಹಡಿಯಿಂದ ವ್ಯಕ್ತಿ ಬಿದ್ದು ಬದುಕುಳಿದ್ದು, ಕೆಳಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಬಲಿಯಾಗಿದ್ದಾರೆ. ಆ ವ್ಯಕ್ತಿ ಮಹಡಿಯಿಂದ ಆಕೆಯ ಮೇಲೆ ಬಿದ್ದಿರುವುದೇ ಈ ಸಾವಿಗೆ ಕಾರಣ. 29 ವರ್ಷದ ಯುವಕ 23 ವರ್ಷದ ಮಹಿಳೆಯ ಮೇಲೆ ಬಿದ್ದು ಆಕೆ ಮೃತಪಟ್ಟಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ.
23 ವರ್ಷದ ಹೌರಾ ಇನಾಬಾ ಸ್ನೇಹಿತನೊಂದಿಗೆ ರಸ್ತೆಯ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆಗ ಯುವಕ ಮೇಲಿನಿಂದ ಆಕೆಯ ಮೇಲೆ ಬಿದ್ದಿದ್ದಾನೆ. ಸ್ಥಳದಲ್ಲಿದ್ದ ಇನ್ನೊಬ್ಬ ಮಹಿಳೆ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ.ಪೊಲೀಸರು ಬಂದು ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ಸಾಗಿಸಿದರು. ಆದರೆ ಹೌರಾ ಇನಾಬಾ ಎಂಬ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.


