ನೀಟ್ ಪ್ರಶ್ನೆ ಪತ್ರಿಕೆ ಸೋರಿದಂತೆ ಪರೀಕ್ಷಾ ವ್ಯವಸ್ಥೆಯ ಲೋಪಗಳನ್ನು ಖಂಡಿಸಿ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘ ಪ್ರತಿಭಟನೆ ನಡೆಸಿ ಲೋಕಭವನಕ್ಕೆ ಮನವಿ ಸಲ್ಲಿಸಲು ತೆರಳುತ್ತಿದ್ದಾಗ
ಪೊಲೀಸರು ಜಲಫಿರಂಗಿ ಪ್ರಯೋಗದ ಜೊತೆ ಬಳಸಿ, ಲಾಠಿ ಪ್ರಹಾರ ಮಾಡಿದ್ದಾರೆ.
ಕೆಲವು ದುಷ್ಕರ್ಮಿಗಳು ಸ್ಥಳದಲ್ಲಿದ್ದ ಮಾಧ್ಯಮ ಸಿಬ್ಬಂದಿಯ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೆಲವು ಮಾಧ್ಯಮ ಕಾರ್ಯಕರ್ತರ ಬಟ್ಟೆಗಳು ಹರಿದು ಹೋಗಿವೆ, ಕ್ಯಾಮೆರಾಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಲಾಗಿದೆ ಮತ್ತು ಕೆಲವು ಪತ್ರಕರ್ತರು ಗಾಯಗೊಂಡಿದ್ದಾರೆ.
ನೀಟ್ ಪತ್ರಿಕೆ ಸೋರಿಕೆಯ ಬಗ್ಗೆ ನ್ಯಾಯಯುತ ತನಿಖೆ, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಲಾಠಿಚಾರ್ಜ್ ಖಂಡಿಸಿ ವಿದ್ಯಾರ್ಥಿಗಳು ಲೋಕ ಭವನಕ್ಕೆ ಮೆರವಣಿಗೆ ನಡೆಸುತ್ತಿದ್ದರು. ಪ್ರತಿಭಟನಾಕಾರರು ಮುಂದುವರಿಯದಂತೆ ತಡೆಯಲು ಪೊಲೀಸರು ಬ್ಯಾರಿಕೇಡ್‌ಗಳನ್ನು ನಿರ್ಮಿಸಿದರು, ಇದು ವಾಗ್ವಾದಕ್ಕೆ ಕಾರಣವಾಗಿ ಪೊಲೀಸರು ಲಾಠಿ ಚಾರ್ಜ್ ಮತ್ತು ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾಗಿ ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಲಾಗಿತ್ತು ಮತ್ತು ಹೆಚ್ಚುವರಿ ಭದ್ರತಾ ಪಡೆಗಳನ್ನು ಕರೆಸಲಾಗಿದೆ. ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸದಿದ್ದರೆ, ಆಂದೋಲನವನ್ನು ತೀವ್ರಗೊಳಿಸಲಾಗುವುದು ಎಂದು AISA ಎಚ್ಚರಿಸಿದೆ.


