Menu

ಬೊಮ್ಮಸಂದ್ರ ಪಿಜಿಯಲ್ಲಿ ಸಿಲಿಂಡರ್‌ ಸ್ಫೋಟ: ಹತ್ತು ಕಾರ್ಮಿಕರಿಗೆ ಗಂಭೀರ ಗಾಯ

ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿರುವ ಪಿಜಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಈ ದುರಂತ ನಡೆದಿದ್ದು, ನಾಗರಾಜ್ ರೆಡ್ಡಿ ಅವರು ಬೇರೆಯವರಿಗೆ ಪಿಜಿ ನಡೆಸಲು ಕಟ್ಟಡವನ್ನು ಲೀಸ್‌ಗೆ ನೀಡಿದ್ದರು ಎನ್ನಲಾಗಿದೆ. ಗುರುವಾರ ಬೆಳಗ್ಗೆ ಪಿಜಿಯಲ್ಲಿದ್ದ ಕಾರ್ಮಿಕರು ಎದ್ದು ಲೈಟ್‌ ಆನ್‌ ಮಾಡುವಾಗ ಸಿಲಿಂಡರ್‌ ಸ್ಫೋಟಗೊಂಡಿದೆ.

ಈ ಪಿಜಿಯಲ್ಲಿ ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕೆಲಸಕ್ಕಾಗಿ ಬಂದಿದ್ದ 10ಕ್ಕೂ ಹೆಚ್ಚು ಕಾರ್ಮಿಕರು ವಾಸವಾಗಿದ್ದರು. ಗಾಯಗೊಂಡವರೆಲ್ಲರೂ ಹೊರ ರಾಜ್ಯದವರಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಸ್ಫೋಟದ ತೀವ್ರತೆಗೆ ಕಟ್ಟಡದ ಭಾಗಗಳಿಗೂ ಹಾನಿಯಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸದ್ದಾರೆ. ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿದೆಯೇ ಅಥವಾ ಬೇರೆ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಸಿಲಿಂಡರ್ ಸ್ಫೋಟದಿಂದ ಗಂಭೀರ ಗಾಯಗೊಂಡಿರುವ ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Posts

Leave a Reply

Your email address will not be published. Required fields are marked *