ಕಳೆದ ಐದು ವರ್ಷಗಳಲ್ಲಿ ಮೂರು ಬಾರಿ ಯುಜಿ-ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಆದರೆ ಈವರೆಗೂ ಯಾರೂ ಯಾವುದೇ ಹೊಣೆಗಾರಿಕೆ ವಹಿಸಿಕೊಂಡಿಲ್ಲ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಹೊತೆ ಸರ್ಕಾರ ಏಕೆ ಮಾತುಕತೆ ನಡೆಸುತ್ತಿಲ್ಲ ಎಂದು ಮಾಜಿ ಐಪಿಎಸ್, ತಮಿಳುನಾಡು ಬಿಜೆಪಿಯ ಮಾಜಿ ಮುಖಂಡ ಕೆ. ಅಣ್ಣಾಮಲೈ ಪ್ರಶ್ನಿಸಿದ್ದಾರೆ.
ಈ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ವ್ಯವಸ್ಥೆಯ ಬದಲಾವಣೆಗೆ ಆಗ್ರಹಿಸಿ ಬೀದಿಗಿಳಿದು ಹೋರಾಟ ಮಾಡುವಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಲು ಇಷ್ಟು ಸಮಯ ತೆಗೆದುಕೊಂಡದ್ದು ಏಕೆ, ಪ್ರತಿಭಟನೆ ತೀವ್ರ ಹಂತಕ್ಕೆ ತಲುಪುವವರೆಗೆ ಅರ್ಥಪೂರ್ಣ ಮಾತುಕತೆ ಏಕೆ ವಿಳಂಬವಾಯಿತು, ನಿಮ್ಮನ್ನು ಕಾಯುವಂತೆ ಮಾಡಿದ್ದು ಏನು ಎಂದು ಕೇಂದ್ರವನ್ನು ಅಣ್ಣಾಮಲೈ ಪ್ರಶ್ನಿಸಿದ್ದಾರೆ.
ಯಾವುದೇ ರಾಷ್ಟ್ರದ ಶಕ್ತಿ ಅಲ್ಲಿನ ಯುವಜನ. ನಮ್ಮ ವಿದ್ಯಾರ್ಥಿಗಳು ನಮ್ಮ ಶಿಕ್ಷಣ ವ್ಯವಸ್ಥೆಯ ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ನಂಬಿಕೆ ಕಳೆದುಕೊಂಡರೆ ನಾವು ರಾಷ್ಟ್ರದ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸಿದಂತೆ ಎಂದು ಎಚ್ಚರಿಸಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ನಟ ಸಲ್ಮಾನ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಪೋಸ್ಟ್ ಹಂಚಿಕೊಂಡಿರುವ ಸಲ್ಮಾನ್,
ಪ್ರತಿಭಟನೆ ಶಾಂತಿಯುತವಾಗಿ ನಡೆಯುತ್ತಿತ್ತು. ಅದು ಹಿಂಸೆಗೆ ತಿರುಗಿದ್ದು ಖೇದಕರ. ಪ್ರಶ್ನೆಪತ್ರಿಕೆ ಸೋರಿಕೆ ಗಂಭೀರ ವಿಷಯ. ಈ ಪ್ರತಿಭಟನೆಯನ್ನು ಯಾವುದೇ ರೀತಿಯ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.


