Friday, September 11, 2026
Menu

ರೇಣುಕಾಸ್ವಾಮಿ ಕೊಲೆ ಕೇಸ್‌ ಸಾಕ್ಷಿಗಳ ಬೆದರಿಸಿದ್ದವರಿಗೆ ಜಾಮೀನು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ದರ್ಶನ್ ಗ್ಯಾಂಗ್‌ನ ಸುಹಾಸ್, ವೈಭವ್ ಮತ್ತು ಪುನೀತ್ ಎಂಬ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ನೀಡಿದೆ.

ಈ ಮೂವರು ಆರೋಪಿಗಳು ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ತುಮಕೂರಿನ ಬಾರ್ ಮಾಲೀಕ ಹಾಗೂ ಸಿಸಿಟಿವಿ ಡಿವಿಆರ್ ಸೀಜ್‌ಗೆ ಸಂಬಂಧಿಸಿದ ಸಾಕ್ಷಿ ಸಂದೀಪ್ ಎಂಬವರಿಗೆ ಸುಳ್ಳು ಸಾಕ್ಷಿ ಹೇಳುವಂತೆ ಆಮಿಷವೊಡ್ಡಿದ್ದಲ್ಲದೆ ವಾಟ್ಸಾಪ್ ಕರೆಗಳ ಮೂಲಕ ಬೆದರಿಕೆ ಹಾಕಿದ್ದರು ಎ ಎಂದಬ ಆರೋಪವಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಈ ಮೂವರನ್ನು ಅರೆಸ್ಟ್ ಮಾಡಿ, ವಿಚಾರಣೆ ನಡೆಸಿ ಜೈಲಿಗೆ ಕಳಿಸಿದ್ದರು. ಮೊಬೈಲ್‌ಗಳನ್ನು ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೂ ಕಳುಹಿಸಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ 59ನೇ ಸಿಸಿಹೆಚ್‌ ನ್ಯಾಯಾಲಯವು, ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿ ಷರತ್ತುಬದ್ಧ ಜಾಮೀನು ನೀಡಿದೆ.

Related Posts

Leave a Reply

Your email address will not be published. Required fields are marked *