ನಟಿ ತ್ರಿಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಬಂಧಿತರಾಗಿರುವ ತಮಿಳುನಾಡು ಪ್ರತಿಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಇಂದೇ ವಿಶೇಷ ಜಾಮೀನು ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದೆ.
ರೈತರ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಉದಯನಿಧಿ ಮುಖ್ಯಮಂತ್ರಿ ವಿಜಯ್ ವಿರುದ್ಧ ವಾಗ್ದಾಳಿ ನಡೆಸಿದ್ದ ವೇಳೆ ನಟಿ ತ್ರಿಸಾ ಅವರನ್ನು ಉದ್ದೇಶಿಸಿ ದ್ವಂದ್ವಾರ್ಥದ ಅವಹೇಳನಕಾರಿ ಮಾತು ಬಳಸಿರುವ ಆರೋಪವಿದೆ. ಅವರ ಆ ಮಾತಿಗೆ ತಮಿಳುನಾಡಿನಾದ್ಯಂತ ವಿವಿಧ ರಾಜಕೀಯ ಪಕ್ಷಗಳಿಂದ ಆಕ್ರೋಶ ಹಾಗೂ ಖಂಡನೆ ವ್ಯಕ್ತವಾಗಿತ್ತು.
ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆದ ಅರ್ಜಿಯ ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು, ತಂಜಾವೂರು ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಪೊಲೀಸರು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲು ಬಯಸುತ್ತಿಲ್ಲ. ವಿಚಾರಣೆ ನಡೆಸಿದ ನಂತರ ಅವರನ್ನು ವಿಶೇಷ ಜಾಮೀನು ಮೇಲೆ ಬಿಡುಗಡೆ ಮಾಡಲು ನಿರ್ಧರಿಸಿದೆ ನ್ಯಾಯಾಲಯಕ್ಕೆ ತಿಳಿಸಿದರು.
ರೈತರೊಂದಿಗೆ ಪ್ರತಿಭಟನೆ ಕಾರ್ಯಕ್ರದ ವೇಳೆ ಮಉದಯನಿಧೀ ಮಾತನಾಡುತ್ತಿದ್ದಾಗ, ತ್ರಿಶಾ ಎಂಬ ಘೋಷಣೆ ಕೇಳಿ ಬಂದಿತ್ತು. ತಮಿಳಿನಲ್ಲಿ ದ್ವಂದ್ವಾರ್ಥ ಬರುವ ರೀತಿಯಲ್ಲಿ ನಟಿಯನ್ನು ಗುರಿಯಾಗಿಸಿ ಮಾತನಾಡಿದ್ದರು ಎಂಬ ಆರೋಪದಡಿ ಉದಯನಿನಿಧಿ ವಿರುದ್ಧ ಪೊಲೀಸ್ ಠಾಣೆ ಮತ್ತು ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿತ್ತು.


