Menu

ಯಾದಗಿರಿ ಸೀಲ್ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಬಲಿ

ಯಾದಗಿರಿಯ ಗುರುಮಠಕಲ್ ತಾಲೂಕಿನ ಕಡೇಚೂರು ಬಳಿಯ ಸೀಲ್ ಲ್ಯಾಬೋರೇಟರಿ ಕಾರ್ಖಾನೆಯಲ್ಲಿ ಗ್ಯಾಸ್‌ ಸೋರಿಕೆಯಂದ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ವಿಕ್ರಮ್ ಮತ್ತು ಸಂಜಯ್ ಹಾಗೂ ತೆಲಂಗಾಣದ ಮಹಬೂಬ್‌ನಗರದ ಗಣೇಶ್ (25 ವರ್ಷದೊಳಗಿನವರು) ಎಂದು ಗುರುತಿಸಲಾಗಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಕಾರ್ಖಾನೆಯ ಒಳಗೆ ಮಧ್ಯರಾತ್ರಿ 1 ಗಂಟೆಯಿಂದ 2 ಗಂಟೆಯ ಅವಧಿಯಲ್ಲಿ ರಾಸಾಯನಿಕ ಸೋರಿಕೆಯಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಖಾನೆಯನ್ನು ಬಂದ್‌ ಮಾಡಲಾಗಿದೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *