Menu

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸವಾರರ ವಿರುದ್ಧ ಆರ್‌ಟಿಒ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಕಾನೂನು ಬಾಹಿರ ಬೈಕ್ ಟ್ಯಾಕ್ಸಿ ಸೇವೆಗಳ ವಿರುದ್ಧ ಸಾರಿಗೆ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದು, ಒಂದು ವಾರ ನಡೆಯಲಿರುವ ಕಾರ್ಯಾಚರಣೆಯಲ್ಲಿ ನಗರದ ಹನ್ನೊಂದು ಆರ್‌ಟಿಒ ವ್ಯಾಪ್ತಿಯಲ್ಲಿ ಬೈಕ್ ಟ್ಯಾಕ್ಸಿ ವಾಹನಗಳ ತಪಾಸಣೆ ನಡೆಸಿ ಜಪ್ತಿ ಮಾಡಲಾಗುತ್ತಿದೆ.

ಮೊಬೈಲ್ ಆ್ಯಪ್‌ಗಳ ಮೂಲಕ ಕಾನೂನು ಬಾಹಿರವಾಗಿ ಬಾಡಿಗೆ ಸೇವೆ ನೀಡುತ್ತಿದ್ದ ಬೈಕ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆಯುತ್ತಿದ್ದಾರೆ. ಬೆಂಗಳೂರು ಪಶ್ಚಿಮ ಆರ್‌ಟಿಒ ವ್ಯಾಪ್ತಿಯಲ್ಲಿ 10, ಉತ್ತರ ಆರ್‌ಟಿಒದಲ್ಲಿ ಎಂಟು ಹಾಗೂ ರಾಜಾಜಿನಗರದಲ್ಲಿ 12 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಯಲಹಂಕದ ಸಿಂಗನಾಯಕನಹಳ್ಳಿ ಆರ್‌ಟಿಒ ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಬೈಕ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೈಕ್ ಸವಾರರ ಮೊಬೈಲ್‌ಗಳನ್ನು ಕೂಡ ಪಡೆದು ದಾಖಲೆ ಪರಿಶೀಲನೆ ಕೈಗೊಂಡಿದ್ದಾರೆ.

ಕಾನೂನುಬಾಹಿರವಾಗಿ ಬೈಕ್ ಟ್ಯಾಕ್ಸಿ ಸೇವೆ ನಡೆಸುತ್ತಿರುವವರ ವಾಹನ ಜಪ್ತಿ ಮಾತ್ರವಲ್ಲ, ಚಾಲಕರ ಡ್ರೈವಿಂಗ್ ಲೈಸೆನ್ಸ್ ಹಾಗೂ ವಾಹನದ ಆರ್‌ಸಿ ಅಮಾನತು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಾಜಿನಗರದಲ್ಲಿ 50ಕ್ಕೂ ಹೆಚ್ಚು ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಆರ್‌ಟಿಒ ಕಚೇರಿ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿತ್ತು. ರ‍್ಯಾಪಿಡೋ ಚಾಲಕರು, ಆಟೋ ಚಾಲಕರೇ ಬೈಕ್ ಟ್ಯಾಕ್ಸಿ ಬುಕ್ ಮಾಡಿ ಅಧಿಕಾರಿಗಳಿಗೆ ಮಾಹಿತಿ ನೀಡಿ ವಾಹನಗಳನ್ನು ಸೀಜ್ ಮಾಡಿಸುತ್ತಿದ್ದಾರೆ ಎಂದು ಬೈಕ್‌ ಸವಾರರು ಆರೋಪಿಸಿದ್ದಾರೆ.

Related Posts

Leave a Reply

Your email address will not be published. Required fields are marked *