ಮದುವೆ ಸಿದ್ಧತೆಯಲ್ಲಿದ್ದ ಯುವತಿ ಮಾಜಿ ಪ್ರಿಯಕರನ ಕಿರುಕುಳ ತಾಳಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೌಲ್ ಬಜಾರ್ನಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಫಿರ್ದೋಸ್ ಕೌಲ್ ಬಜಾರ್ ನಿವಾಸಿ ಅಜೀಂ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತನ ವರ್ತನೆಯಿಂದ ಬೇಸತ್ತು ಬಳಿಕ ಆತನ ಸ್ನೇಹಿತ ಸೋಹೈಲ್ ಜೊತೆ ಮದುವೆಯಾಗಲು ಸಿದ್ಧತೆ ನಡೆಸಿದ್ದಳು. ಈ ವಿಚಾರ ತಿಳಿದು ಕೋಪಗೊಂಡ ಅಜೀಂ, ತನ್ನ ಜೊತೆಗಿರುವ ಖಾಸಗಿ ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದನು.
ಇದರಿಂದ ಬೇಸತ್ತ ಯುವತಿ ಲೈವ್ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮೊದಲು ತಾನು ಮದುವೆಯಾಗಬೇಕಿದ್ದ ಯುಕನಿಗೆ ಕರೆ ಮಾಡಿ ವಿವರಿಸಿ, ತನ್ನ ಆತ್ಮಹತ್ಯೆಗೆ ಕಾರಣರಾದವರಿಗೆ ಶಿಕ್ಷೆ ನೀಡುವಂತೆ ಮನವಿ ಮಾಡಿದ್ದಾಳೆ.
ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಈ ಇಬ್ಬರು ಕಾರಣ ಎಂದು ಯುವತಿ ಪೋಷಕರು ಕೌಲ್ ಬಜಾರ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇಬ್ಬರೂ ಯುವಕರು ತಲೆ ಮರೆಸಿಕೊಂಡಿದ್ದಾರೆ, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.


