ಕರ್ತವ್ಯಕ್ಕೆಂದು ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಕೊಡಗಿನ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್ ಪಿ.ಜೆ. (55) ಮೃತರು.
ಮೈಸೂರಿನಿಂದ ವಿರಾಜಪೇಟೆಗೆ ಕರ್ತವ್ಯಕ್ಕೆ ತೆರಳಲು ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಇಲವಾಲ ಸಮೀಪ ಬಸ್ ತಲುಪುತ್ತಿದ್ದಂತೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ ಆಸ್ಪತ್ರೆ ತಲುಪುವ ಮೊದಲೇ ಅವರು ಬಸ್ನಲ್ಲಿ ಅಸು ನೀಗಿದ್ದಾರೆ.
ಮಾಡೆಲಿಂಗ್ ಯುವತಿ ಆತ್ಮಹತ್ಯೆ
ಮಾಡೆಲಿಂಗ್ನಲ್ಲಿ ಗುರುತಿಸಿಕೊಂಡಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಲ್ಪೆಯ ಕಲ್ಮಾಡಿ ಎಂಬಲ್ಲಿ ನಡೆದಿದೆ.
ಕಲ್ಮಾಡಿ ನಿವಾಸಿ ರತ್ನಾ ಅವರ ಮಗಳು ಕೃತಿ ಬಂಗೇರಾ (27) ಆತ್ಮಹತ್ಯೆ ಮಾಡಿಕೊಂಡಾಕೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಕೃತಿ ಕಡಿಯಾಳಿ ಬಳಿಯ ಖಾಸಗಿ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದರು.
ಐದು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು ಎನ್ನಲಾಗಿದೆ.
ಆಗಸ್ಟ್ 6 ರಂದು ತಾಯಿ ರತ್ನಾ ಕೆಲಸದ ನಿಮಿತ್ತ ಮಲ್ಪೆಗೆ ತೆರಳಿದ್ದರು. ಎರಡನೇ ಮಗಳೂ ಉಡುಪಿಗೆ ಹೋಗಿದ್ದರು. ಮಧ್ಯಾಹ್ನ ಮನೆಗೆ ಹಿಂದಿರುಗಿದ ವೇಳೆ, ಕೃತಿ ಒಳಗಿನಿಂದ ಮನೆ ಬಾಗಿಲು ಹಾಕಿಕೊಂಡಿದ್ದರು. ಬಾಗಿಲು ತಟ್ಟಿದರೂ ತೆರೆಯದ ಕಾರಣ ರತ್ನಾ ತನ್ನ ಸೋದರನಿಗೆ ಕರೆ ಮಾಡಿದ್ದರು. ಅವರು ಬಂದು ಬಾಗಿಲು ಒಡೆದಾಗ ಬೆಡ್ ರೂಮ್ನಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಕೃತಿ ಕಳೆದ ಹಲವು ದಿನಗಳಿಂದ ಒತ್ತಡದಲ್ಲಿದ್ದು, ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


