Menu

ಮೂಡಿಗೆರೆಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಯುವಕರ ಸಾವು

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗುರುಕಿರಣ್ (28), ಮೋಹನ್ (30), ಜ್ಞಾನೇಶ್ (28) ಮೃತಪಟ್ಟ ಯುವಕರು, ಪ್ರೇಮ್ ಕುಮಾರ್ ಹಾಗೂ ಹೃತಿಕ್ ಗಂಭೀರವಾಗಿ ಗಾಯಗೊಂಡವರು. ಮೃತಪಟ್ಟವರು ಮತ್ತು ಗಾಯಗೊಂಡವರು ತುಮಕೂರು ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ಗ್ರಾಮದ ನಿವಾಸಿಗಳಾಗಿದ್ದು, ಸ್ನೇಹಿತರು ಎಂದು ತಿಳಿದು ಬಂದಿದೆ.

ಐವರು ಸ್ನೇಹಿತರು ಕಾರಿನಲ್ಲಿ ತುಮಕೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು.ಳೆ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂಬದಿಯಿಂದ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸ್ಥಳೀಯರು ಕೂಡಲೇ ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *