Menu

ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಮಾರುತ್ತಿದ್ದಾತ ಬೆಳಗಾವಿಯಲ್ಲಿ ಅರೆಸ್ಟ್‌

ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಬಳಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ.

ಭೋಲು ಪ್ರಜಾಪತಿ ಎಂಬಾತ ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ತುಂಬಿಸಿ ಚಾಕ್ಲೆಟ್ ರೂಪದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಬಂಧಿತನಿಂದ 54 ಸಾವಿರ ರೂಪಾಯಿ ಮೌಲ್ಯದ 6 ಕೆಜಿ ಗಾಂಜಾ, ಒಂದು ಫೋನ್ ಹಾಗೂ ಸ್ಕೂಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬಹುಕೋಟಿ ವಂಚನೆ: ಶಿವಾನಂದ ನೀಲಣ್ಣವರ್‌ ನಿವಾಸಗಳಿಗೆ ಇಡಿ ದಾಳಿ

ಬೆಳಗಾವಿಯಲ್ಲಿ ಶಿವಂ ಅಸೋಸಿಯೇಟ್ ಕಂಪನಿ ಮಾಲೀಕ ಶಿವಾನಂದ ನೀಲಣ್ಣವರ್‌ ವಿರುದ್ಧದ ಬಹುಕೋಟಿ ವಂಚನೆ ಪ್ರಕರಣದ ತನಿಖೆಗೆ ಇಡಿ ಮುಂದಾಗಿದೆ.

ಮಂಗಳೂರು ಮತ್ತು ಗೋವಾದಿಂದ ಇಡಿ ಅಧಿಕಾರಿಗಳ ತಂಡ ಬೆಳಗಾವಿಯ ಮೂರು ಕಡೆಗಳಲ್ಲಿ ದಾಳಿ ನಡೆಸಿದೆ. ಶಿವ ಬಸವನಗರದ ಎಂಎಸ್ ಟವರ್‌ನಲ್ಲಿರುವ ನಿವಾಸ, ಬಡಕುಂದ್ರಿ ಗ್ರಾಮದಲ್ಲಿರುವ ನಿವಾಸ ಹಾಗೂ ಚಿಕ್ಕೋಡಿಯಲ್ಲಿರುವ ಸುಭಾಷ್ ನಂದರಗಿಯ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಾನಂದ ನೀಲಣ್ಣವರ್ ಹಾಗೂ ಪತ್ನಿ ಸಂಗೀತಾ ಇಬ್ಬರನ್ನೂ ಅಧಿಕಾರಿಗಳು ವಿಚಾರಣೆ ನಡೆಸಿದರು.

ಶಿವಾನಂದ ವಿರುದ್ಧ 40,000 ಕ್ಕೂ ಹೆಚ್ಚು ಜನರಿಗೆ 4,500 ಕೋಟಿ ರೂ. ವಂಚನೆ ಮಾಡಿದ ಆರೋಪವಿದೆ. ಮೇ.15ರಂದು ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸಿಐಡಿಗೆ ವರ್ಗಾವಣೆಯಾಗಿತ್ತು.

ಶಿವಾನಂದ ಹೆಚ್ಚಿನ ಬಡ್ಡಿದರದ ಭರವಸೆ ನೀಡಿ, ಹೂಡಿಕೆದಾರರಿಂದ ಸಾವಿರಾರು ಕೋಟಿ ಹಣ ಸಂಗ್ರಹಿಸಿದ ಆರೋಪದಲ್ಲಿ ಜೈಲು ಸೇರಿದ್ದರು. ಜು.13 ರಂದು ಷರತ್ತು ವಿಧಿಸಿ 93ನೇ ಸಿಟಿ ಸಿವಿಲ್ – ಸೆಷನ್ಸ್‌ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು.

Related Posts

Leave a Reply

Your email address will not be published. Required fields are marked *