Menu

ಕಾವೇರಿಗಾಗಿ ತಮಿಳುನಾಡು ಅರ್ಜಿ: ವಿಚಾರಣೆಗೆ ಸುಪ್ರೀಂ ಅಸ್ತು

ಸಿಡಬ್ಲ್ಯುಸಿ ಆದೇಶ ಪ್ರಕಾರ ತಕ್ಷಣವೇ ನೀರು ಹರಿಸಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಆಗಸ್ಟ್‌ ೧೩ರಂದು ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ.

ತಮಿಳುನಾಡು ಸರ್ಕಾರದ ಪ ವಕೀಲ ಸಿ.ಎಸ್. ವೈದ್ಯನಾಥನ್ ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡಿದರು. ಮನವಿಯನ್ನು ಆಲಿಸಿದ ನ್ಯಾಯಪೀಠವು ಗುರುವಾರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.

ಜುಲೈ 30 ರಂದು ನಡೆದ ಸಭೆಯಲ್ಲಿ ಕರ್ನಾಟಕದ ಕಬಿನಿ ಹಾಗೂ ಕೃಷ್ಣರಾಜ ಸಾಗರ ಜಲಾಶಯಗಳಿಂದ ದಿನಕ್ಕೆ 3,500 ಕ್ಯೂಸೆಕ್‌ನಂತೆ 15 ದಿನ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿತ್ತು. ಈ ನಿರ್ಧಾರವನ್ನು ಜಾರಿ ಮಾಡುವಂತೆ ತಮಿಳುನಾಡು ಸರ್ಕಾರವು ಆಗಸ್ಟ್ 3 ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ದಿನಕ್ಕೆ 3,500 ಕ್ಯೂಸೆಕ್‌ನಂತೆ 15 ದಿನಗಳಿಗೆ ಒಟ್ಟು 4.536 ಟಿಎಂಸಿ ನೀರನ್ನು ಆಗಸ್ಟ್ 12 ರೊಳಗೆ ಬಿಡುಗಡೆ ಮಾಡಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ತಮಿಳುನಾಡು ಕೋರಿದೆ. ದ್ರಾವಿಡ ಮುನ್ನೇತ್ರ ಕಳಗಂ ಇದೇ ರೀತಿ ಪ್ರತ್ಯೇಕ ಅರ್ಜಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ.

Related Posts

Leave a Reply

Your email address will not be published. Required fields are marked *