Menu

ತುಮಕೂರಿನಲ್ಲಿ ಲಾರಿಗೆ ಗೂಡ್ಸ್‌ ವಾಹನ ಡಿಕ್ಕಿ: ಇಬ್ಬರು ಬಲಿ

ತುಮಕೂರಿನ ಸೋರೆಕುಂಟೆ ಬಳಿ ಲಾರಿಗೆ ಹಿಂಬದಿಯಿಂದ ಬಂದ ಗೂಡ್ಸ್‌ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲೊ ಒಬ್ಬರನ್ನು ಷಣ್ಮುಗ (50) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆ ಕಾರ್ಯ ಮುಂದುವರಿದಿದೆ.

ಬೆಂಗಳೂರಿನಿಂದ ಚಿತ್ರದುರ್ಗ ಕಡೆಗೆ ಟ್ರ್ಯಾಕ್ಟರ್‌ಗಳನ್ನು ತುಂಬಿಸಿಕೊಂಡು ಲಾರಿ ಸಂಚರಿಸುತ್ತಿತ್ತು. ಅದೇ ರಸ್ತೆಯಲ್ಲಿ ವೇಗವಾಗಿ ಬಂದ ಗೂಡ್ಸ್‌ ವಾಹನವು ಸೋರೆಕುಂಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯ ಹಿಂಬಾಗಕ್ಕೆ ರಭಸದಿಂದ ಡಿಕ್ಕಿ ಹೊಡೆದಿದೆ. ಗೂಡ್ಸ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಅಸು ನೀಗಿದ್ದಾರೆ.

ಕೋರಾ ಪೊಲೀಸ್ ಠಾಣೆಯ ಸಿಬ್ಬಂದಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

ಶೌಚಾಲಯ ಗುಂಡಿಗೆ ಬಿದ್ದು ಇಬ್ಬರ ಸಾವು

ಶುಂಠಿ ಕೀಳಲು ತೆರಳಿದ್ದ ಮಹಿಳೆ ಶೌಚಾಲಯದ ಗುಂಡಿಗೆ ಬಿದ್ದಾಗ ಆಕೆಯನ್ನು ರಕ್ಷಿಸಲು ಮುಂದಾದ ವ್ಯಕ್ತಿ ಕೂಡ ವಿಷಾನಿಲದಿಂದ ಮೃತಪಟ್ಟ ಘಟನೆ ಕೊಡಗಿನ ಓಮವಾರಪೇಟೆಯ ಹೊಸತೋಟ ಗ್ರಾಮದಲ್ಲಿ ನಡೆದಿದೆ.
ಅದೇ ಗರಾಮದ ಜನಾರ್ದನ (43) ಹಾಗೂ ನಿತ್ಯ (46) ಮೃತಪಟ್ಟವರು.

ನಿತ್ಯ ಅವರು ಶುಂಠಿ ಬೇಕೆಂದು ಸಂಬಂಧಿಕರ ಮನೆಗೆ ತೆರಳಿ ಗದ್ದೆಯಿಂದ ಶುಂಠಿ ತೆಗೆದುಕೊಂಡು ಬರುತ್ತೇನೆ ಎಂದು ಹೋಗಿದ್ದಾರೆ. ಗದ್ದೆಯ ಸಮೀಪದಲ್ಲಿದ್ದ ಹಳೆಯ ಶೌಚಾಲಯದ ಗುಂಡಿ ಏಕಾಏಕಿ ಕುಸಿದು ಅದರೊಳಗೆ ಬಿದ್ದಿದ್ದಾರೆ. ಇದನ್ನು ನೋಡಿದ ಜನಾರ್ದನ ಅವರು ನಿತ್ಯ ಅವರನ್ನು ರಕ್ಷಿಸಲು ಗುಂಡಿಯೊಳಗೆ ಇಳಿದಿದ್ದಾರೆ. ಗುಂಡಿಯೊಳಗಿದ್ದ ವಿಷಕಾರಿ ಅನಿಲಕ್ಕೆ ಇಬ್ಬರೂ ಬಲಿಯಾಗಿದ್ದಾರೆ. ಸೋಮವಾರಪೇಟೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *