Menu

ಏರ್‌ಪೋರ್ಟ್‌ ತಾಜ್‌ ಹೋಟೆಲ್‌ನಲ್ಲಿ ಮಕ್ಕಳಿಬ್ಬರ ಕೊಲೆಗೈದು ವ್ಯಕ್ತಿ ಆತ್ಮಹತ್ಯೆ ಯತ್ನ

ಬೆಂಗಳೂರಿನ ಏರ್‌ಪೋರ್ಟ್‌ ತಾಜ್‌ ಹೋಟೆಲ್‌ನಲ್ಲಿ ವ್ಯಕ್ತಿಯೊಬ್ಬರು ತನ್ನ ಇಬ್ಬರು ಹೆಣ್ಣು ಮಕ್ಕಳ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೋಟೆಲ್‌ನ ಮೂರನೇ ಮಹಡಿಯ ಕೊಠಡಿಯಲ್ಲಿ ಈ  ಭಯಾನಕ ಕೃತ್ಯ ಎಸಗಲಾಗಿದೆ.

ಇಮ್ರಾನ್‌ ಎಂಬ ವ್ಯಕ್ತಿ ತನ್ನ ಐದು ಹಾಗೂ 10 ವರ್ಷದ ಇಬ್ಬರು ಹೆಣ್ಣುಮಕ್ಕಳ ಹತ್ಯೆ ಮಾಡಿ, ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶೇಕ್ ಜೆಹರಾ (5 ವರ್ಷ), ಶೇಕ್ ಜೋಯಾ (10 ವರ್ಷ) ತಂದೆಯಿಂದ ಕೊಲೆಯಾದ ಮಕ್ಕಳು.
ಮಕ್ಕಳ ಕೊಲೆ ಮಾಡಲೆಂದು ಹೋಟೆಲ್‌ನಲ್ಲಿ ಮುಂಚಿತವಾಗಿಯೇ ರೂಂ ಬುಕ್ ಮಾಡಿದ್ದ ಎನ್ನಲಾಗಿದೆ. ಕೊಲೆ ಬಳಿಕ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದು, ಡೆತ್‌ನೋಟ್‌ನಲ್ಲಿ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಉಲ್ಲೇಖಿಸಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

ಇಮ್ರಾನ್‌ ಬೆಂಗಳೂರಿನ ನಾಗವಾರದ ನಿವಾಸಿ, ಕ್ಯಾಬ್‌ ಸಂಸ್ಥೆಯಲ್ಲಿ ಮ್ಯಾನೇಜರ್‌. ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಇಮ್ರಾನ್‌ನನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಏರ್‌ಪೋರ್ಟ್‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *