Wednesday, August 12, 2026
Menu

ಪ್ರಜ್ವಲ್‌ ರೇವಣ್ಣ ಸೆಲ್‌ನಲ್ಲಿ ಮೊಬೈಲ್‌ ಪತ್ತೆ, ಜೈಲು ಅಧಿಕಾರಿ ಸಸ್ಪೆಂಡ್‌

prajwal revanna

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಂಗಳೂರಿನ ಕೇಂದ್ರ ಕಾರಾಗೃಹವಾಸಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇರುವ ಸೆಲ್‌ನಲ್ಲಿ ಮೊಬೈಲ್‌ ಪತ್ತೆಯಾಗಿದ್ದು, ಈ ಹಿನ್ನೆಲೆ ಜೈಲು ಅಧಿಕಾರಿಯನ್ನು ಸಸ್ಪೆಂಡ್‌ ಮಾಡಲಾಗಿದೆ.

ಕರ್ತವ್ಯ ಲೋಪ ಹಿನ್ನೆಲೆ ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣ ರಂಗಾಪುರ ಅವರನ್ನು ಅಮಾನತುಗೊಳಿಸಿ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಖೈದಿಗಳು ಧರಿಸುವ ಬಿಳಿ ಬಟ್ಟೆ ಧರಿಸುತ್ತಿರಲಿಲ್ಲ ಎಂಬ ಆರೋಪವಿದ್ದು, ಈಗ ಸೆಲ್‌ನಲ್ಲಿ ಅಂಡ್ರಾಯ್ಡ್ ಮೊಬೈಲ್ ಪತ್ತೆಯಾಗಿದೆ. ಜೈಲು ಎಸ್‌ಪಿ ಅನ್ಶುಕುಮಾರ್‌ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. ಆ.6ರಂದು ಜೈಲಿನ ಬ್ಯಾರಕ್‌ಗಳಲ್ಲಿ ಜೈಲಿನ ಅಧಿಕಾರಿಗಳು ದಾಳಿ ನಡೆಸಿದಾಗ ಪ್ರಜ್ವಲ್ ಬಳಿ ಮೊಬೈಲ್ ಪತ್ತೆಯಾಗಿರಲಿಲ್ಲ. ಹೀಗಾಗಿ ಮೊಬೈಲ್ ಯಾರು ಕೊಟ್ಟಿದ್ದು ಎನ್ನುವ ಬಗ್ಗೆ ಮಧ್ಯಾಹ್ನದ ಒಳಗೆ ತಿಳಿಸಬೇಕು. ಇಲ್ಲವಾದಲ್ಲಿ ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡೋದಾಗಿ ಖಡಕ್ ಸೂಚನೆ ನೀಡಿದ್ದಾರೆ.

ಸಿಸಿಬಿ ಸತತ 6 ಗಂಟೆ ದರ್ಶನ್, ಪವಿತ್ರಗೌಡ, ಪ್ರಜ್ವಲ್ ರೇವಣ್ಣ ಸೇರಿದಂತೆ ಎಲ್ಲಾ ವಿಐಪಿ ಖೈದಿಗಳ ಬ್ಯಾರಕ್‌ನಲ್ಲಿ ಶೋಧ ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣ ಹಾಸಿಗೆ ಕೆಳಗೆ ಬಚ್ಚಿಟ್ಟಿದ್ದ ಮೊಬೈಲ್ ಪತ್ತೆಯಾಗಿದೆ.

Related Posts

Leave a Reply

Your email address will not be published. Required fields are marked *