ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ಮತ್ತು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ ೧೪ರಂದು ಶುಕ್ರವಾರ ಚುನಾವಣೆ ನಡೆಯಲಿದೆ. ಎರಡೂ ಸ್ಥಾನಗಳಿಗೆ ನಾಮಪತ್ರ ಪತ್ರ ಸಲ್ಲಿಸಲು ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶವಿದೆ.
ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ನಿಗದಿತ ರೀತಿಯಲ್ಲಿ ಸೂಚನಾ ಪತ್ರದ ಮೂಲಕ ಸಂಬಂಧಪಟ್ಟ ಸದನದ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕಾಗುತ್ತದೆ. ವಿಧಾನಸಭೆ ಸಭಾಧ್ಯಕ್ಷ ಸ್ಥಾನವು ಯು.ಟಿ ಖಾದರ್ ರಾಜೀನಾಮೆಯಿಂದ ತೆರವಾಗಿದೆ. ವಿಧಾನಪರಿಷತ್‌ನ ಸಭಾಪತಿ ಸ್ಥಾನವು ಬಸವರಾಜ ಹೊರಟ್ಟಿ ರಾಜೀನಾಮೆಯಿಂದ ಖಾಲಿಯಾಗಿದೆ. ಹೀಗಾಗಿ ಎರಡೂ ಸದನಗಳಿಗೆ ಹೊಸ ಅಧ್ಯಕ್ಷರ ಆಯ್ಕೆ ನಡೆಯಲಿದೆ.
ವಿಧಾನಸಭೆಯ ಸಭಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯ ಹೆಸರನ್ನು ಲಿಖಿತವಾಗಿ ಸೂಚನಾ ಪತ್ರದ ಮೂಲಕ ವಿಧಾನಸಭೆ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕು. ಈ ಪ್ರಸ್ತಾವನೆಯನ್ನು ಮತ್ತೊಬ್ಬ ಶಾಸಕರು ಅನುಮೋದಿಸುತ್ತಾರೆ. ಸಭಾಧ್ಯಕ್ಷರಾಗಿ ಆಯ್ಕೆಯಾಗುವ ಅಭ್ಯರ್ಥಿಯು ಆ ಸ್ಥಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸಲು ಸಮ್ಮತಿ ಸೂಚಿಸುವ ಪತ್ರ ಕೂಡ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕಿದೆ.
ವಿಧಾನಪರಿಷತ್‌ನ ಸಭಾಪತಿ ಚುನಾವಣೆಯಲ್ಲಿಯೂ ಇದೇ ಪ್ರಕ್ರಿಯೆ ಇರುತ್ತದೆ. ಸಭಾಪತಿ ಸ್ಥಾನಕ್ಕೆ ಆಯ್ಕೆಯಾಗುವ ಅಭ್ಯರ್ಥಿಯ ಹೆಸರನ್ನು ಲಿಖಿತವಾಗಿ ವಿಧಾನಪರಿಷತ್‌ನ ಕಾರ್ಯದರ್ಶಿಗೆ ಸೂಚಿಸಬೇಕು. ಮತ್ತೊಬ್ಬ ಸದಸ್ಯರು ಸೂಚನಾ ಪತ್ರ ಅನುಮೋದಿಸುವರು, ಅಭ್ಯರ್ಥಿಯು ಸಭಾಪತಿ ಸ್ಥಾನದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸಲು ಒಪ್ಪಿಗೆ ಸೂಚಿಸುವ ಪತ್ರ ಸಲ್ಲಿಬೇಕು.
ವಿಧಾನಸಭೆಯ ಸಭಾಧ್ಯಕ್ಷ ಸ್ಥಾನಕ್ಕೆ ಶಾಸಕ ಜಿ.ಎಸ್.ಪಾಟೀಲ್ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅನುಮೋದಿಸಿದೆ, ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಹೆಸರು ಅನುಮೋದನೆಗೊಂಡಿದೆ ಎಂದು ಹೇಳಲಾಗುತ್ತಿದೆ.
ವಿಧಾನಪರಿಷತ್‌ನ ಸಭಾಪತಿ ಸ್ಥಾನಕ್ಕೆ ವಿಧಾನಪರಿಷತ್ ಸದಸ್ಯ ಸಲೀಂ ಅಹಮದ್ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ. ಉಪಸಭಾಪತಿ ಸ್ಥಾನಕ್ಕೆ ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಹೆಸರಿಗೆ ಅನುಮೋದನೆ ನೀಡಲಾಗಿದೆ ಎಂದು ಎಂಬ ಮಾಹಿತಿ ಹರಿದಾಡುತ್ತಿದೆ.


