Wednesday, August 12, 2026
Menu

ಕಾವೇರಿ ಹರಿಸಿ: ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡಿನ ಅರ್ಜಿಗಳ ವಿಚಾರಣೆ ಆ. 17ಕ್ಕೆ

supreme court

ಕಾವೇರಿ ನೀರು ಬಿಡುಗಡೆಗೊಳಿಸಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸರ್ಕಾರ, ಡಿಎಂಕೆ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳನ್ನು ಆಗಸ್ಟ್‌ 17ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್‌ ಹೇಳಿದೆ.

ರೈತರ ಪರವಾಗಿ ಹಾಜರಾದ ವಕೀಲ ಪಿ. ವಿಲ್ಸನ್, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠದ ಮುಂದೆ ತುರ್ತು ಪಟ್ಟಿಗಾಗಿ ಪ್ರತ್ಯೇಕ ಅರ್ಜಿಯನ್ನು ಪ್ರಸ್ತಾಪಿಸಿದರು. ಈ ಅರ್ಜಿ ನಾಳೆ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಪೀಠದ ಮುಂದೆ ಬರಬೇಕಿತ್ತು. ಆದರೆ ಅವರು ಆರೋಗ್ಯವಾಗಿಲ್ಲ ಎಂದು ಸಿಜೆಐ ಹೇಳಿದರು.

ಆಗಸ್ಟ್ 10 ರಂದು ಕಾವೇರಿ ನೀರನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಆಗಸ್ಟ್ 13 ರಂದು ಪರಿಶೀಲಿಸಲು ಒಪ್ಪಿಕೊಂಡಿತ್ತು. ಆಗಸ್ಟ್ ಮೂರರಂದು ತಮಿಳುನಾಡು ಸಿಎಂ ವಿಜಯ್‌ ನೇತೃತ್ವದ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಕಾವೇರಿ ನೀರು ತಕ್ಷಣ ಬಿಡುಗಡೆ ಮಾಡಲು ನಿರ್ದೇಶನಗಳನ್ನು ನೀಡುವಂತೆ ಕೋರಿತ್ತು.

15 ದಿನಗಳವರೆಗೆ ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಮಾಡಿರುವ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಎತ್ತಿಹಿಡಿದಿದೆ.

Related Posts

Leave a Reply

Your email address will not be published. Required fields are marked *