Menu

ಧಾರವಾಡದಲ್ಲಿ ಪ್ರೇಯಸಿ ಆತ್ಮಹತ್ಯೆ ಬಳಿಕ ಪ್ರಿಯಕರ ಸುಸೈಡ್‌

ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದ ಬಳಿಕ ಪ್ರಿಯಕರನೂ ಆತದ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೋಟಬಾಗಿ ಗ್ರಾಮದಲ್ಲಿ ನಡೆದಿದೆ.

ಪ್ರೇಯಸಿ ಮೇಘಾ ಗುಬ್ಬನ್ನವರ್(20) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಪ್ರಿಯಕರ ತರುಣ್ ಸಾಗರ್ ಕುರಕುರಿ(21) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ವಾಚ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ತರುಣ್ ಸಾಗರ್ ದಾನೇಶ್ವರಿ ನಗರದ ಪಿಜಿಯೊಂದರಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ.

ಹೆಚ್ಚು ಮೊಬೈಲ್ ಬಳಸುತ್ತಿದ್ದೀಯ ಎಂದು ಬೈದಿದ್ದಕ್ಕೆ ಮೇಘಾ ಆತ್ಮಹತ್ಯೆ ಮಾಡಿಕೊಂಡಿದ್ದಳು ಎನ್ನಲಾಗಿದೆ. ಈ ವಿಷಯ ತಿಳಿದು ತರುಣ್ ಸ್ನೇಹಿತನ ಪಿಜಿ ರೂಂನಲ್ಲಿ ಸುಸೈಡ್‌ ಮಾಡಿದ್ದಾನೆ. ತರುಣ್ ಗೆಳೆಯನ ರೂಮ್‌ನಲ್ಲಿ ಬಂದು ತಂಗಿದ್ದ‌. ಮೇಘಾ ಜೊತೆ ಜಗಳವಾಗಿದೆ, ಆಕೆಯ ಸಹೋದರನಿಗೆ ಈ ವಿಷಯ ಗೊತ್ತಾಗಿದೆ ಎಂದು ಸ್ನೇಹಿತನಿಗೆ ತರುಣ್‌ ತಿಳಿಸಿದ್ದ ಎನ್ನಲಾಗಿದೆ.

ತರಣ್ ಸಾಗರ್ ಪೋಷಕರಿಗೆ ಕೇಳಿದರೆ ಈ ಪ್ರೀತಿ, ಪ್ರೇಮದ‌ ಬಗ್ಗೆ ಗೊತ್ತಿರಲಿಲ್ಲ. ಬೆಳಗ್ಗೆ ಫೋನ್‌ ಎತ್ತದೇ ಇದ್ದಾಗ ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ. ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ನಿಶ್ಚಿತಾರ್ಥ ಮಾಡಿಕೊಂಡಿದ್ದ ಎಸ್‌ಬಿಐ ಉದ್ಯೋಗಿಗಳ ಶವ ಪತ್ತೆ

ನಿಶ್ಚಿತಾರ್ಥ ಮಾಡಿಕೊಂಡಿದ್ದು, ಡಿಸೆಂಬರ್ 26ಕ್ಕೆ ಮದುವೆ ನಿಗದಿ ಮಾಡಿಕೊಂಡಿದ್ದ ಎಸ್‌ಬಿಐ ಬ್ಯಾಂಕ್ ಉದ್ಯೋಗಿಗಳಾದ್ದ ಯುವ ಜೋಡಿ ಪ್ರತ್ಯೇಕ ಸ್ಥಳಗಳಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ಗೊತ್ತಾಗಿಲ್ಲ.

ಮೃತರನ್ನು ಕಾಸರಗೋಡಿನ ಪಳ್ಳಿಕ್ಕರದ ಪಿ. ಅನುಶ್ರೀ(25) ಹಾಗೂ ಕಣ್ಣೂರಿನ ವಿ. ಅಮಲ್ (26) ಎಂದು ಗುರುತಿಸಲಾಗಿದೆ. ಅನುಶ್ರೀ ಮೈಸೂರು ಜಿಲ್ಲೆಯ ಹುಣಸೂರಿನ ಎಸ್‌ಬಿಐ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಅನುಶ್ರೀ ಶವವಾಗಿ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಕೊಚ್ಚಿಯ ಎರ್ನಾಕುಲಂ ನಾರ್ತ್ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ ಎರ್ನಾಕುಲಂನಲ್ಲಿ ಉದ್ಯೋಗ ಮಾಡುತ್ತಿದ್ದರು.

ಮಂಗಳವಾರ ರಾತ್ರಿಯವರೆಗೆ ಅನುಶ್ರೀ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಸಹೋದರಿ ಕರೆ ಮಾಡಿದಾಗ, ಅಮಲ್ ಜೊತೆ ಫೋನ್‌ನಲ್ಲಿ ಮಾತನಾಡುತ್ತಿರುವುದಾಗಿ ಹೇಳಿದ್ದರು ಎಂದು ವರದಿಯಾಗಿದೆ. ಬುಧವಾರ ಬೆಳಗ್ಗೆ ಅನುಶ್ರೀ ಕುಟುಂಬ ಕಾಲ್‌ ಮಾಡಿದಾಗ ಪ್ರತಿಕ್ರಿಯೆ ಬಂದಿಲ್ಲ. ಅವರು ನೆರೆಹೊರೆಯವರಿಗೆ ಮಾಹಿತಿ ನೀಡಿದ್ದಾರೆ. ನೆರೆಹೊರೆಯವರು ಹೋಗಿ ನೋಡಿದಾಗ ಮೃತಪಟ್ಟಿರುವುದು ಕಂಡು ಬಂದಿದೆ. ಹುಣಸೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *