Wednesday, September 30, 2026
Menu

ಕಾರಿಗೆ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗದ ದೊಡ್ಡಸಿದ್ದವ್ವನ ಹಳ್ಳಿ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಲಾರಿಯೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ.

ದೊಡ್ಡಸಿದ್ದವ್ವನ ಹಳ್ಳಿ ಗ್ರಾಮದ ಬಳಿ ಸಂಚರಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಬಳಿಕ ಮತ್ತೊಂದು ಲಾರಿಗೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.  ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಅನೈತಿಕ ಸಂಬಂಧ: ನಾಲ್ಕು ವರ್ಷದ ಮಗುವಿನ ಹತ್ಯೆ

ಅನೈತಿಕ ಸಂಬಂಧದ ಹಿನ್ನೆಲೆ ನಾಲ್ಕು ವರ್ಷದ ಗಮಡು ಮಗುವನ್ನು ಹತ್ಯೆ ಮಾಡಿರುವ ಕೃತ್ಯವು ಕೊಡಗಿನ ವಿರಾಜಪೇಟೆ ಪಟ್ಟಣದ ಚಿಕ್ಕಪೇಟೆ ಲೈನ್ ಮನೆಯಲ್ಲಿ ನಡೆದಿದೆ. ಚರಣ್ (4) ಕೊಲೆಯಾಗಿರುವ ಮಗು. ಎರಡು ತಿಂಗಳಿನಿಂದ ಬಾಲಕನ ತಾಯಿ, ಆಕೆಯ ಸಹೋದರಿ ಹಾಗೂ ಆರೋಪಿ ಒಂದೇ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಮಹಿಳೆಯ ಮೇಲೆ ಅತ್ಯಾಚಾರ ಆರೋಪವೂ ಕೇಳಿಬಂದಿದ್ದು, ಮಗುವಿನ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ರಾಯಚೂರಿನ ಪ್ರತಾಪ್ (45) ಎಂಬಾತನ ವಿರುದ್ಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Related Posts

Leave a Reply

Your email address will not be published. Required fields are marked *