Wednesday, February 05, 2025
Menu

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿಕೆ ಶಿವಕುಮಾರ್

“ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯ ಉನ್ನತ ಶಿಕ್ಷಣ ಸಚಿವರ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಮೊದಲುಬೆಂಗಳೂರಿನ  ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ,  “ವಿರೋಧ ಪಕ್ಷದ ನಾಯಕ ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ. ಅನವಶ್ಯಕವಾಗಿ ಈ ವಿಚಾರಗಳನ್ನು ಎಳೆದಾಡಲು ನಾನು ಹೋಗುವುದಿಲ್ಲ. ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ” ಎಂದು ಹೇಳಿದರು.

“ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ” ಎಂದರು.

Related Posts

Leave a Reply

Your email address will not be published. Required fields are marked *