Wednesday, August 19, 2026
Menu

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ನಿಧನ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ (೬೭) ಬೆಂಗಳೂರಿನಲ್ಲಿರುವ ಮಗಳ ಮನೆಯಲ್ಲಿ ಮಂಗಳವಾರ ನಿಧನರಾದರು. ಒಂದು ವರ್ಷದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರಿಗೆ ಎರಡು ಬಾರಿ ಶಸ್ತ್ರ ಚಿಕಿತ್ಸೆ ಆಗಿತ್ತು.

ನಾಗೇಶ್ ಅವರ ಅಂತ್ಯಕ್ರಿಯೆ ತಿಪಟೂರಿನ ಸ್ವಗೃಹದಲ್ಲಿ ನಡೆಯಲಿದೆ. ಪಾರ್ಥಿವ ಶರೀರವನ್ನು ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ತರಲಾಗಿದ್ದು, ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಅಂತಿಮ ದರ್ಶನ ಪಡೆದಿದ್ದಾರೆ. ನಾಗೇಶ್ ನಿಧನಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ವಿಜಯೇಂದ್ರ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ತಿಪಟೂರು ಕ್ಷೇತ್ರದ ಅಭಿವೃದ್ಧಿಗೆ ನಾಗೇಶ್ ಸಾಕಷ್ಟು ಶ್ರಮಿಸಿದ್ದರು. ನೀರಾವರಿ ಯೋಜನೆಗಳಿಗಾಗಿ ಹೆಚ್ಚಿನ ಕೆಲಸ ಮಾಡಿಸಿದ್ದರು. ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಶಿಕ್ಷಣ ಸಚಿವರಾಗಿ ಹೊಸ ಶಿಕ್ಷಣ ನೀತಿ ಜಾರಿಗೆ ತರಲು ಶ್ರಮಿಸಿದ್ದರು.

ಬಿ.ಸಿ ನಾಗೇಶ್ ಅವರ ನಿಧನಕ್ಕೆ ಸಿಎಂ ಡಿ‌ ಕೆ ಶಿವಕುಮಾರ್  ಸಂತಾಪ ಸೂಚಿಸಿ, ಸರಳತೆಯಿಂದ ಅವರು ಎಲ್ಲರ ಆಪ್ತರಾಗಿದ್ದರು.‌ ನೇರ ನಡೆ- ನುಡಿಗೆ ಹೆಸರಾಗಿದ್ದರು. ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಜನರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು. ಶಾಸಕರಾಗಿ ಹಾಗೂ ಶಿಕ್ಷಣ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯ ಎಂದು ಹೇಳಿದ್ದಾರೆ.

ಶಿಕ್ಷಣ ಕ್ಷೇತ್ರದ ಸುಧಾರಣೆ ಮತ್ತು ವಿದ್ಯಾರ್ಥಿಗಳ ಹಿತದ ಬಗ್ಗೆ ಅವರು ವಿಶೇಷ ಕಾಳಜಿ ಹೊಂದಿದ್ದರು. ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಸೌಹಾರ್ದಯುತ ಸಂಬಂಧ ಕಾಪಾಡಿಕೊಂಡಿದ್ದರು. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ದುಃಖತಪ್ತ ಕುಟುಂಬದ ಸದಸ್ಯರಿಗೆ, ಬಂಧುಬಳಗಕ್ಕೆ ಹಾಗೂ ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ಮತ್ತು ಧೈರ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ  ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *