Wednesday, August 19, 2026
Menu

ಮೀನು ಹಿಡಿಯಲು ನದಿಗಿಳಿದ ಮೂವರು ಯುವಕರು ನಾಪತ್ತೆ

ಮೀನು ಹಿಡಿಯಲೆಂದು ತುಂಗಭದ್ರಾ ನದಿಗೆ ಇಳಿದಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದಿದೆ.
ರಾಜ (22), ಯಮನಪ್ಪ (20) ಹಾಗೂ ಅಜ್ಜಪ್ಪ (26) ನಾಪತ್ತೆಯಾಗಿರುವ ಯುವಕರು ಎಂದು ಗುರುತಿಸಲಾಗಿದೆ.

ಇವರು ತುಂಗಭದ್ರಾ ನದಿಯ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿದ್ದು, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದ್ದಾರೆ. ಎಸ್‌ಡಿಆರ್‌ಎಫ್ ತಂಡ ಹಿನ್ನೀರಿನಲ್ಲಿ ಶೋಧ ಕಾರ್ಯ ಮುಂದುವರಿಸಿದೆ. ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಲ್ಲರ್‌ ಕುಸಿದು ಶಾಲಾ ಆವರಣದಲ್ಲಿ ಬಾಲಕ ಸಾವು

ಶಾಲಾ ಆವರಣದಲ್ಲಿ ಪಿಲ್ಲರ್‌ ಕುಸಿದು ಹತ್ತು ವರ್ಷದ ವಿದ್ಯಾರ್ಥಿ ಮೃತಪಟ್ಟಿರುವ ಗಟನೆ ಚಿಕ್ಕನಾಯಕನಹಳ್ಳಿಯ ಬೆಳಗಿ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮತ್ತಿಘಟ್ಟ ಗ್ರಾಮದ ಆನಂದ್ ಮೂರ್ತಿ ಅವರ ಮಗ ಧನುಷ್ (10) ಮೃತ ವಿದ್ಯಾರ್ಥಿ, ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ.

ಬೆಳಗ್ಗೆ ಎಂದಿನಂತೆ ಧನುಷ್ ಶಾಲೆಗೆ ಬಂದಿದ್ದು, ಸ್ನೇಹಿತರ ಜೊತೆ ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ. ಶಾಲೆಯ ಪಕ್ಕದಲ್ಲಿರುವ ನಂದಿನಿ ಹಾಲಿನ ಡೈರಿ ಕಟ್ಟಡದ ಪಿಲ್ಲರ್ ಏಕಾಏಕಿ ಕುಸಿದು ಧನುಷ್ ಮೇಲೆ ಬಿದ್ದಿದೆ. ಧನುಷ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಂದನಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಟ್ಟಡದ ಕಾಮಗಾರಿ ಕಳಪೆಯಾಗಿದ್ದರಿಂದಲೇ ಪಿಲ್ಲರ್ ಕುಸಿದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Posts

Leave a Reply

Your email address will not be published. Required fields are marked *