Wednesday, August 19, 2026
Menu

ಕೋಲ್ಕೊತಾದ ಹೋಟೆಲ್‌ನಲ್ಲಿ ಅಗ್ನಿ ದುರಂತಕ್ಕೆ ಒಂಬತ್ತು ಮಂದಿ ಬಲಿ

ಕೋಲ್ಕೊತಾದ ಹೋಟೆಲ್‌ವೊಂದರಲ್ಲಿ ಬುಧವಾರ ಮುಂಜಾನೆ ಅಗ್ನಿ ದುರಂತ ಸಂಭವಿಸಿದ್ದು, ಮಗು ಸೇರಿ ಕನಿಷ್ಠ ಒಂಬತ್ತು ಮಂದಿ ಅಸು ನೀಗಿದ್ದಾರೆ. ನಗರದ ಫ್ರೀ ಸ್ಕೂಲ್‌ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ಈ ದುರಂತ ನಡೆದಿದೆ, ಬೆಂಕಿ ಹೊತ್ತಿಕೊಂಡಿದ್ದರಿಂದ ಹೋಟೆಲ್‌ನೊಳಗಿದ್ದ ಅತಿಥಿಗಳು ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಎಸಿ ಸ್ಫೋಟಗೊಂಡಿದ್ದರಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖಾ ವರದಿ ಹೇಳಿದೆ. ನ್ಯೂ ಮಾರ್ಕೆಟ್ ಸಮೀಪದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಈ ಹೋಟೆಲ್ ನಗರದ ಜನನಿಬಿಡ ಪ್ರದೇಶದಲ್ಲಿದೆ. ನಾಲ್ಕು ಅಗ್ನಿಶಾಮಕ ವಾಹನಗಳು ,ವಿಪತ್ತು ನಿರ್ವಹಣಾ ತಂಡವೂ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರ ಗುರುತು ಹಾಗೂ ಅಗ್ನಿ ಅವಘಡದ ಸಂಪೂರ್ಣ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಮೃತಪಟ್ಟ ಒಂಬತ್ತು ಜನರು ಬಾಂಗ್ಲಾ ಪ್ರಜೆಗಳಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ಬಂದಿದ್ದರು ಎನ್ನಲಾಗಿದೆ. ಪೊಲೀಸ್‌ ತನಿಖೆ ಮುಂದುವರಿದಿದೆ.

Related Posts

Leave a Reply

Your email address will not be published. Required fields are marked *